Friday, February 3, 2023

Latest Posts

ಉತ್ತರ ಕರ್ನಾಟಕದ 21 ಸಕ್ಕರೆ ಕಾರ್ಖಾನೆಗಳ ಮೇಲೆ ಅಧಿಕಾರಿಗಳ ದಾಳಿ

ಹೊಸದಿಗಂತ ವರದಿ, ಬೆಳಗಾವಿ:

ಸಕ್ಕರೆ ಹಾಗೂ ಜವಳಿ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಅವರ ನಿರ್ದೇಶನದಂತೆ ಬುಧವಾರ ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟ, ವಿಜಯಪುರ, ಉತ್ತರ ಕನ್ನಡ ಜಿಲ್ಲೆಯ 21 ಸಕ್ಕರೆ ಕಾರ್ಖಾನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಬ್ಬು ಬೆಳೆಯುವ ರೈತರಿಂದ ತೂಕದಲ್ಲಿ ಸಕ್ಕರೆ ಕಾರ್ಖಾನೆಗಳು ಮೋಸು ಮಾಡುತ್ತವೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಅವರು ತೂಕ ಮತ್ತು ಅಳತೆ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನೀಡಿದ ಸೂಚನೆಯಂತೆ ಬುಧವಾರ ಏಕ ಕಾಲಕ್ಕೆ ಉತ್ತರ ಕರ್ನಾಟಕದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಎಂಟು ಸಕ್ಕರೆ ಕಾರ್ಖಾನೆ ಸೇರಿದಂತೆ ಉತ್ತರ ಕರ್ನಾಟಕದ ಕೆಲವೊಂದು ಸಕ್ಕರೆ ಕಾರ್ಖಾನೆಗಳಿಗೆ ಸಕ್ಕರೆ ಇಲಾಖೆಯ ಅಧಿಕಾರಿಗಳು ಶಾಕ್‌ ನೀಡಿದ್ದು, ತೂಕದ ವ್ಯತ್ಯಾಸ ಇರುವುದು ಕಂಡುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!