ಮೈಸೂರ್ ಪಾಕ್‌ಗೆ ಅಧಿಕೃತವಾಗಿ ಜಾಗತಿಕ ಮನ್ನಣೆ: ಚಾಮುಂಡಿ ಬೆಟ್ಟದಲ್ಲಿ ಸಂಭ್ರಮಾಚರಣೆ

ಹೊಸದಿಗಂತ ವರದಿ, ಮೈಸೂರು:

ಮೈಸೂರು ಅರಸರ ಕಾಲದಲ್ಲಿ ತಯಾರಾಗಿದ ಮೈಸೂರು ಪಾಕ್ ಸಿಹಿ ತಿನಿಸು ಇದೀಗ ಜಾಗತಿಕ ಸಿಹಿ ತಿನಿಸುಗಳ ಪಟ್ಟಿಯಲ್ಲಿ 15 ನೇ ಸ್ಥಾನಗಳಿಸುವ ಮೂಲಕ ಜಾಗತಿಕ ಮನ್ನಣೆ ಪಡೆದಿರುವ ಹಿನ್ನಲೆಯಲ್ಲಿ ಸ್ನೇಹ ಬಳಗದ ವತಿಯಿಂದ ನಗರದ ಚಾಮುಂಡಿ ಬೆಟ್ಟದಲ್ಲಿ ಪ್ರವಾಸಿಗರು, ಭಕ್ತರಿಗೆ ಮೈಸೂರು ಪಾಕ್ ವಿತರಿಸಿ ಸಂಭ್ರಮಾಚರಣೆ ನಡೆಸಲಾಯಿತು.

ಎಲ್ಲರಿಗೂ ಮೈಸೂರು ಪಾಕ್ ಮಹತ್ವ ಹಾಗೂ ಅದರ ಇತಿಹಾಸ ತಿಳಿಸಲಾಯಿತು.

ಈ ವೇಳೆ ಮಾತನಾಡಿದ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ಮೈಸೂರು ಪಾಕ್‌ಗೆ ಅಧಿಕೃತವಾಗಿ ಜಾಗತಿಕ ಮನ್ನಣೆ ಸಿಕ್ಕಿರುವುದು ಮೈಸೂರಿಗೆ ಹೆಮ್ಮೆಯ ವಿಷಯ. ಚಿಕ್ಕ ಮಕ್ಕಳಿಂದ ಹಿರಿಯ ನಾಗರಿಕವರೆಗೂ ಮೈಸೂರು ಪಾಕ್ ತಿನ್ನಲು ಅಚ್ಚುಮೆಚ್ಚು, ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ ಇರುವ ಮೈಸೂರು ಪಾಕ್ ಇಂದು ವಿಶ್ವದ್ಯಂತ ತನ್ನ ಹಿರಿಮೆ ಸಾರುತ್ತಿದೆ, ಹಾಗೆಯೇ ಪ್ರವಾಸೋದ್ಯಮ ಇಲಾಖೆ ಮೈಸೂರು ಪಾಕ್ ತಯಾರಿಸುವ ಅಡುಗೆ ಉದ್ಯಮವನ್ನು ಸೃಷ್ಟಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕರಾದ ಡಾ. ಶಶಿಶೇಖರ ದೀಕ್ಷಿತ್, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಎಂ.ಡಿ.ಪಾರ್ಥಸಾರಥಿ, ಜಗದೀಶ್, ಸಾಮಾಜಿಕ ಚಿಂತಕರಾದ ದೂರ ರಾಜಣ್ಣ, ಆನಂದ್ ದಯಾನಂದ, ಆದರ್ಶ್, ಅಮರ್ ಬಾಬು ಇನ್ನಿತರರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!