ದಶಪಥಕ್ಕೆ ಅಧಿಕೃತ ಚಾಲನೆ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಿದ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಂತೂ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಗೆ ಚಾಲನೆ ಸಿಕ್ಕಿದೆ. ಪ್ರಧಾನಿ ಮೋದಿಯವರು ಇಂದು ಅಧಿಕೃತವಾಗಿ ಲೋಕಾರ್ಪಣೆ ಮಾಡಿದ್ದಾರೆ. 8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ ಹೈವೇ ನಿರ್ಮಾಣವಾಗಿದೆ.

118 ಕಿಮೀ ಉದ್ದದ ಈ ಯೋಜನೆಯನ್ನು ಒಟ್ಟು 8,480 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದು ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು 3 ಗಂಟೆಗಳಿಂದ ಸುಮಾರು 75 ನಿಮಿಷಗಳವರೆಗೆ ಕಡಿಮೆ ಮಾಡುತ್ತದೆ.

ಬೆಂಗಳೂರು-ಮೈಸೂರುಎಕ್ಸ್‌ಪ್ರೆಸ್‌ವೇ ನಿರ್ಮಾಣವು NH-275ರ ಭಾಗವಾಗಿದ್ದು, ಇದು ನಾಲ್ಕು ರೈಲು ಮೇಲ್ಸೇತುವೆಗಳು, ಒಂಬತ್ತು ಮಹತ್ವದ ಸೇತುವೆಗಳು, 40 ಸಣ್ಣ ಸೇತುವೆಗಳು ಮತ್ತು 89 ಅಂಡರ್‌ಪಾಸ್‌ಗಳ ಅಭಿವೃದ್ಧಿಯನ್ನು ಒಳಗೊಂಡಿದೆ.

ಜೊತೆಗೆ ಮೈಸೂರು-ಕುಶಾಲನಗರ 4 ಪಥದ ಹೆದ್ದಾರಿಗೆ ಪ್ರಧಾನ ಮಂತ್ರಿ ಶಂಕುಸ್ಥಾಪನೆ ಮಾಡಲಿದ್ದಾರೆ. 92 ಕಿಮೀ ವ್ಯಾಪಿಸಿರುವ ಈ ಯೋಜನೆಯನ್ನು ಸುಮಾರು 4130 ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಯು ಬೆಂಗಳೂರಿನೊಂದಿಗೆ ಕುಶಾಲನಗರದ ಸಂಪರ್ಕವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಪ್ರಯಾಣದ ಸಮಯವನ್ನು ಸುಮಾರು 5 ರಿಂದ ಕೇವಲ 2.5 ಗಂಟೆಗಳವರೆಗೆ ಅರ್ಧಕ್ಕೆ ಇಳಿಸಲು ಸಹಾಯ ಮಾಡುತ್ತದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!