ರಾಜ್ಯ ಸರ್ಕಾರದ ‘ಯುವನಿಧಿ’ ಯೋಜನೆಗೆ ಅಧಿಕೃತ ಚಾಲನೆ: ಫಲಾನುಭವಿಗಳ ಖಾತೆಗೆ ಹಣ ಜಮಾ

ಹೊಸದಿಂಗತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಚಾಲನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಫಲಾನುಭವಿಗಳ ಖಾತೆಗೆ ನೇರವಾಗಿ ನಗದು ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದರು.

ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಪದವೀಧರರು ಮಾಸಿಕ ಭತ್ಯೆ ಪಡೆಯುವ ಯುವನಿಧಿ ಯೋಜನೆ ಕಾರ್ಯಕ್ರಮವನ್ನು ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಲಾಗಿತ್ತು. ನೋಂದಾಯಿತ ಪದವೀಧರರಿಗೆ ಮಾಸಿಕ 3000 ರೂ., ಡಿಪ್ಲೊಮಾ ಪದವೀಧರರು 1500 ರೂ. ಹಣ ಜಮೆ ಮಾಡಲಾಗಿದೆ.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ, ಹಾವೇರಿ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಮತ್ತುಶ್ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!