ಜಂಬೂ ಸವಾರಿಗೆ ಅಧಿಕೃತ ಚಾಲನೆ: ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಸಾಗಿದ ಅಭಿಮನ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2023) ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ (Dasara Jamboo Savari) ಮೆರವಣಿಗೆಗೆ ಚಾಲನೆ ನೀಡಲಾಯಿತು.

ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ನಾಡ ಅಧಿದೇವತೆ ಚಾಮುಂಡಿತಾಯಿಯನ್ನು ಹೊತ್ತು ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದನು. ದಸರಾ

ಮಂಗಳವಾರ ಸಂಜೆ 4.40 ರಿಂದ 5 ಗಂಟೆಯ ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ದಸರಾ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಾಲನೆ ನೀಡಿದರು. ಅರಮನೆ ಅಂಗಳದಲ್ಲಿ ಅಂಬಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು. ಈ ವೇಳೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Krishnadatta Chamaraja Wadiyar), ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್‌.ಸಿ.ಮಹದೇವಪ್ಪ (H.C.Mahadevappa), ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಮೇಯರ್‌ ಶಿವಕುಮಾರ್‌ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ಸಿಎಂಗೆ ಸಾಥ್‌ ನೀಡಿದರು.

ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ರಾಷ್ಟ್ರಗೀತೆ ನುಡಿಸುವ ವೇಳೆ 21 ಕುಶಾಲತೋಪು ಸಿಡಿಸಲಾಯಿತು. ರಾಷ್ಟ್ರಗೀತೆ ವೇಳೆ ಜನರು ಎದ್ದು ನಿಂತು ಗೌರವ ಸಲ್ಲಿಸಿದರು. ಅಲ್ಲದೇ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ಚಾಮುಂಡಿತಾಯಿಯನ್ನು ಕಣ್ತುಂಬಿಕೊಂಡು ಜನರು ಧನ್ಯತಾ ಭಾವ ಮೆರೆದರು. ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಅರ್ಜುನ ಹೆಜ್ಜೆ ಹಾಕಿದ. ನೌಫತ್‌ ಮತ್ತು ಸಾಲಾನೆಗಳಾಗಿ ಭೀಮ, ಗೋಪಿ, ಧನಂಜಯ, ಮಹೇಂದ್ರ, ಪ್ರಶಾಂತ್ ಆನೆಗಳು ಸಾಗಿದವು. ಅಂಬಾರಿ ಹೊತ್ತ ಕ್ಯಾಪ್ಟನ್‌ ಅಭಿಮನ್ಯು ಜೊತೆ ಕುಮ್ಕಿ ಆನೆಗಳಾಗಿ ವಿಜಯಾ, ವರಲಕ್ಷ್ಮಿ ಸಾಗಿದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!