ದರ್ಶನ್​ಗೆ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ನೀಡಲು ಅಧಿಕಾರಿಗಳು ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್ ಕುರ್ಚಿಗಾಗಿ ಅರ್ಜಿ ಸಲ್ಲಿಸಿದ್ದು. ಈ ಬಗ್ಗೆ ವೈದ್ಯರು ಪರೀಕ್ಷೆ ನಡೆಸಿ ವರದಿ ನೀಡಿದ್ದಾರೆ. ವೈದ್ಯಕೀಯ ವರದಿಯನ್ನು ಪರಿಶೀಲಿಸಿದ ನಂತರ ಸರ್ಜಿಕಲ್ ಚೇರ್ ಸಿದ್ಧಪಡಿಸಲು ಅನುಮೋದನೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಎರಡು ವರದಿಗಳನ್ನು ಪರಿಶೀಲಿಸಲಾಯಿತು. ದರ್ಶನ್ ಕುಟುಂಬದವರ ವರದಿ ಹಾಗೂ ಪರಪ್ಪನ ಅಗ್ರಹಾರ ಜೈಲಿನಿಂದ ಬಂದ ವರದಿಯನ್ನು ಪರಿಶೀಲಿಸಿದ ಬಳಿಕ ದರ್ಶನ್ ಅವರಿಗೆ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ದರ್ಶನ್​ಗೆ ಸರ್ಜಿಕಲ್​ ಚೇರ್​ ನೀಡಲು ಸಿದ್ಧತೆ ನಡೆದಿದೆ. ಬಳ್ಳಾರಿ ಜೈಲಿನಲ್ಲಿ ವೈದ್ಯರು ದರ್ಶನ್​ಗೆ ಹೆಲ್ತ್ ಚೆಕಪ್ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಎ2 ಆಗಿದ್ದು, ಪೊಲೀಸರು ಚಾರ್ಜ್​ಶೀಟ್​ ಸಲ್ಲಿಸುವ ತಯಾರಿಯಲ್ಲಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!