ಮಂಗಳೂರು ಏರ್ ಪೋರ್ಟ್ ನಲ್ಲಿ ಅಧಿಕಾರಿಗಳ ಭರ್ಜರಿ ರೇಡ್: 58 ಲಕ್ಷ ರೂ ಮೌಲ್ಯದ ಚಿನ್ನ ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ 58 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

58 ಲಕ್ಷ ಮೌಲ್ಯದ 812 ಗ್ರಾಂ ಚಿನ್ನವನ್ನು ಪ್ರಯಾಣಿಕರು ದಮ್ಮಾಮ್ ನಿಂದ ಅಕ್ರಮವಾಗಿ ಸಾಗಿಸಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದಾಗ ಹಾರ್ನ್ ಸದ್ದು ಕೇಳಿ ಬಂದಿದೆ. ಹೆಚ್ಚಿನ ಪರೀಕ್ಷೆ ನಡೆಸಿದಾಗ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನ ಇರುವುದು ಕಂಡುಬಂದಿದೆ.

ಇದೀಗ ಆರೋಪಿಯನ್ನು ಬಂಧಿಸಿರುವ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!