ಬಳ್ಳಾರಿಯಲ್ಲಿ ಅಧಿಕಾರಿಗಳ ಭರ್ಜರಿ ರೇಡ್: ಖೋಟಾ ನೋಟು ಪ್ರಿಂಟ್ ಮಾಡ್ತಿದ್ದ ಗ್ಯಾಂಗ್ ಅಂದರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಳ್ಳಾರಿ ನಗರದ ಲಾಡ್ಜ್ ಒಂದರಲ್ಲಿ ರೂಮ್ ಬುಕ್ ಮಾಡಿನ ನಕಲಿ ನೋಟು ಮುದ್ರಿಸುತ್ತಿದ್ದ ಆರೋಪಿಗಳನ್ನು ಬಳ್ಳಾರಿ ಗಾಂಧಿನಗರ ಪೊಲೀಸರು ತನಿಖೆ ನಡೆಸಿ ಬಂಧಿಸಿದ್ದಾರೆ.

ಅಶೋಕ್ ಮತ್ತು ಹರೀಶ್ ಕುಮಾರ್ ಬಂಧಿತ ಆರೋಪಿಗಳು. ಎ1 ಆರೋಪಿಯಾಗಿರುವ ಅಶೋಕ್ ಬ್ಯಾಂಕ್ ಆಫ್ ಬರೋಡಾದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ. ಬ್ಯಾಂಕಿನಲ್ಲಿ ನೋಟು ಚಲಾವಣೆ ವಹಿವಾಟು ಅರಿತಿದ್ದ ಖದೀಮ, ಹರೀಶ್ ಜೊತೆಗೆ ಸೇರಿ ಖೋಟಾ ನೋಟು ಪ್ರಿಂಟ್ ಮಾಡಲು ಪ್ರಯತ್ನಿಸಿದ್ದ. ಅದಕ್ಕಾಗಿ ಬಳ್ಳಾರಿಯ ಮೋಹನ್ ಲಾಡ್ಜ್‌ ನಲ್ಲಿ ಉಳಿದುಕೊಂಡು ಖೋಟಾ ನೋಟು ಪ್ರಿಂಟ್ ಮಾಡಲು ಮುಂದಾಗಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮಾರುಕಟ್ಟೆಯಲ್ಲಿ ನಕಲಿ ನೋಟು ಚಲಾವಣೆ ಮಾಡಲು ಖದೀಮರು ಯೋಜನೆ ರೂಪಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಪಿಐ ಸಿದ್ದರಾಮೇಶ್ವರ, ಪಿಎಸ್ಐ ಸೌಮ್ಯಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ದಾಳಿಯ ವೇಳೆ ರೂಂನಲ್ಲಿ ಇರಿಸಲಾಗಿದ್ದ ಕಲರ್ ಜೆರಾಕ್ಸ್ ಪ್ರಿಂಟರ್ ಮತ್ತು ಸುಮಾರು 8,000 ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!