ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ಯದ ಅಮಲಿನಲ್ಲಿ ರಸ್ತೆ ಮಧ್ಯದಲ್ಲೇ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಮೂತ್ರ ವಿಸರ್ಜಿಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಪೊಲೀಸರ ಘನತೆಗೆ ಮಸಿ ಬಳಿಯುವ ನಾಚಿಕೆಗೇಡಿನ ಈ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಆಗ್ರಾದ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಶಹೀದ್ ನಗರ ಪೊಲೀಸ್ ಔಟ್‌ಪೋಸ್ಟ್‌ನ ಹೊರಗೆ ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ರಸ್ತೆ ಮಧ್ಯೆ ಹಾಗೂ ಜನಸಂದಣಿಯ ಸಮ್ಮುಖದಲ್ಲಿ ಪೊಲೀಸ್ ಪೇದೆಯ ನಾಚಿಕೆಗೇಡಿನ ಕೃತ್ಯಕ್ಕೆ ನೆಟ್ಟಿಗರು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಶಹೀದ್ ನಗರ ಪೊಲೀಸ್ ಔಟ್‌ಪೋಸ್ಟ್‌ನಲ್ಲಿರುವ ಕಾನ್‌ಸ್ಟೆಬಲ್ ಅನ್ನು ಬಬ್ಲು ಗೌತಮ್ ಎಂದು ಗುರುತಿಸಲಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.