ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಸ್ವೀಡನ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಸುಮಾರು 300 ಪ್ರಯಾಣಿಕರಿದ್ದ ವಿಮಾನದಲ್ಲಿ ಆಯಿಲ್ ಲೀಕ್ ಆಗಿದ್ದು, ಮುಂಜಾಗ್ರತಾ ಕ್ರಮವಾಗಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ವಿಮಾನದ ಇಂಜಿನ್‌ನಲ್ಲಿ ಆಯಿಲ್ ಲೀಕ್ ಆಗಿತ್ತು, ಹಾಗಾಗಿ ಇಂಜಿನ್ ಸ್ಥಗಿತಗೊಳಿಸಿ, ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.