ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾಸ್ ಸಿಲಿಂಡರ್ ಬೆಲೆ ಮತ್ತೊಮ್ಮೆ ಏರಿಕೆಯಾಗಿದ್ದು, ಸಾಮಾನ್ಯ ಜನರಿಗೆ ಮತ್ತಷ್ಟು ಹೊರೆಯಾಗಿ ಪರಿಣಮಿಸಿದೆ. ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ರೂ.7 ಏರಿಕೆಯಾಗಿದ್ದು, ಇದರಿಂದಾಗಿ ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ ರೂ.1,780ಕ್ಕೆ ಏರಿಕೆಯಾಗಿದೆ. ಹಿಂದಿನ ಬೆಲೆ ರೂ.1,773 ಏಳು ರೂಪಾಯಿ ಇದ್ದು, ಪ್ರಸ್ತುತ ರೂ.1,780 ಆಗಿದೆ.
ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ ಬದಲಾವಣೆ ಇಲ್ಲ. ವಾಣಿಜ್ಯ ಅನಿಲದ ಬೆಲೆ ಏರಿಕೆಯಿಂದ ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ಶ್ರೀಸಾಮಾನ್ಯನಿಗೆ ಹೊರೆಯಾಗಲಿದೆ.
ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ ರೂ 7 ಹೆಚ್ಚಿಸಿವೆ. ಸಾಮಾನ್ಯವಾಗಿ, ತೈಲ ಕಂಪನಿಗಳು ಪ್ರತಿ ತಿಂಗಳ 1 ರಂದು ಅನಿಲ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ. ಆದರೆ ಈ ಬಾರಿ ಜುಲೈ 4 ರಂದು ಗ್ಯಾಸ್ ಬೆಲೆ ಏರಿಕೆಯಾಗಿರುವುದು ಎಂಬುದು ಗಮನಾರ್ಹ. ಜೂ.1ರಂದು ವಾಣಿಜ್ಯ ಅನಿಲದ ಬೆಲೆಯಲ್ಲಿ ರೂ.83 ಇಳಿಕೆಯಾಗಿತ್ತು.