ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುವುದಾಗಿ ಘೊಷಣೆ ಮಾಡಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಗಗನಕ್ಕೇರಿದೆ.
ಈ ಮೂಲಕ 2014ರ ಬಳಿಕ ಇದೇ ಮೊದಲ ಬಾರಿಗೆ ಬ್ರೆಂಟ್ ಫ್ಯೂಚರ್ಸ್ ನಲ್ಲಿ ಪ್ರತಿ ಬ್ಯಾರೆಲ್ ಗೆ 100 ಡಾಲರ್ ದಾಟಿದೆ ಎಂದು ವರದಿ ತಿಳಿಸಿದೆ.
ರಷ್ಯಾ ವಿಶ್ವದ ಅತಿದೊಡ್ಡ ತೈಲ ಉತ್ಪಾದಕ ರಾಷ್ಟ್ರವಾಗಿದೆ. ಈ ಬೆಲೆ ಏರಿಕೆಗೆ ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ಬಿಕ್ಕಟ್ಟು ತೀವ್ರಗೊಂಡಿರುವುದು ಕಾರಣ ಎನ್ನಲಾಗಿದೆ. ಯುರೋಪಿಯನ್ ಸಂಸ್ಕರಣಾಗಾರಗಳಿಗೆ ರಷ್ಯಾ ತನ್ನ ಕಚ್ಚಾ ತೈಲವನ್ನು ಮಾರಾಟ ಮಾಡುತ್ತಿದೆ.
ಈಗ ಕಚ್ಚಾ ತೈಲದ ಬೆಲೆ ಏರಿಕೆ ಭಾರತದ ಮೇಲೂ ಪರಿಣಾಮ ಬೀರಲಿದೆ. ದೇಶದಲ್ಲಿ ಇದಾಗಲೇ ಕೋವಿಡ್ ಕಾರಣದಿಂದ ಪೆಟ್ರೋಲ್, ಡೀಸೆಲ್ ಸೇರಿ ಇತರ ತೈಲಗಳ ಬೆಲೆ ಗಗನಕ್ಕೇರಿದ್ದು, ಈಗ ರಷ್ಯಾ-ಉಕ್ರೇನ್ ಯುದ್ಧ ಘೋಷಣೆ ಬೆನ್ನಲ್ಲೆ ಕಚ್ಚಾ ತೈಲ ಬೆಲೆ ಏರಿಕೆ ಭಾರತದ ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.