Friday, December 5, 2025

ಶಾಂತಿಯ ಸಂದೇಶದ ನಡುವೆ ‘ತೈಲ ಭರವಸೆ’: ಭಾರತಕ್ಕೆ ಪುಟಿನ್ ನೀಡಿದ ಆಶ್ವಾಸನೆ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದ ಪ್ರವಾಸದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇಂದು ನವದೆಹಲಿಯ ಹೈದರಾಬಾದ್ ಹೌಸ್​​ನಲ್ಲಿ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಸಭೆ ಮುಗಿದ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುಟಿನ್, ಭಾರತದೊಂದಿಗಿನ ಸಂಬಂಧ ಬಲಪಡಿಸುವ ನಿಟ್ಟಿನಲ್ಲಿ ಹಲವು ಮಹತ್ವದ ವಿಚಾರಗಳನ್ನು ಪ್ರಕಟಿಸಿದರು.

ಭಾರತಕ್ಕೆ ತೈಲ ಪೂರೈಕೆಯನ್ನು ಮುಂದುವರಿಸುವುದಾಗಿ ರಷ್ಯಾ ಅಧ್ಯಕ್ಷ ಪುಟಿನ್ ಈ ವೇಳೆ ದೃಢಪಡಿಸಿದರು. ಅಷ್ಟೇ ಅಲ್ಲದೆ, ಭಾರತೀಯ ಮತ್ತು ಯುರೇಷಿಯನ್ ಆರ್ಥಿಕ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ವಲಯವನ್ನು ರಚಿಸುವುದರಿಂದ ಎರಡೂ ದೇಶಗಳ ನಡುವಿನ ವಾಣಿಜ್ಯ ಸಂಪರ್ಕಗಳ ಬೆಳವಣಿಗೆಗೆ ಸಹಕಾರಿಯಾಗಲಿದ್ದು, ಈ ಕುರಿತು ರಷ್ಯಾ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷರಿಗೆ, ಭಾರತವು ಶಾಂತಿಯನ್ನು ಬೆಂಬಲಿಸುತ್ತದೆ ಮತ್ತು ಫೆಬ್ರವರಿ 2022 ರಿಂದ ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಪರಿಹರಿಸಲು ಶಾಂತಿಯುತ ಪರಿಹಾರವನ್ನು ಬಯಸುತ್ತದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪುಟಿನ್, ರಷ್ಯಾ ಕೂಡ ಶಾಂತಿಯುತ ಪರಿಹಾರಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

error: Content is protected !!