ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಕ್ಕಲಿಗರನ್ನು ಎದುರು ಹಾಕಿಕೊಂಡರೆ ಎಷ್ಟು ಸರ್ಕಾರ ಬಿದ್ದಿದೆ ಎಂಬ ಇತಿಹಾಸವಿದೆ. ಇಲ್ಲಿದಿದ್ದರೆ ನಾವು ಕಾನೂನು ರೀತಿಯಲ್ಲಿ ಹೋರಾಟ ಮಾಡಲಿದ್ದೇವೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪ ಗೌಡ ಎಚ್ಚರಿಕೆ ನೀಡಿದ್ದಾರೆ.
ಜಾತಿ ಗಣತಿ ವರದಿ ಹಾಗೂ ಸಂಪುಟ ಸಭೆಗೆ ಮಂಡನೆ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ ಒಕ್ಕಲಿಗ ಸಂಘ ಜಾತಿ ಗಣತಿ ವಿರುದ್ಧ ಸಮರ ಸಾರಿದೆ.
ನಗರದಲ್ಲಿ ಒಕ್ಕಲಿಗ ಸಂಘದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗವೂ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿ ಹತ್ತು ವರ್ಷ ಆಗಿದೆ. ಜಾತಿಗಣತಿಗೆ ವರದಿ ಹಾಗೂ ಕ್ಯಾಬಿನೆಟ್‌ನಲ್ಲಿ ಸಲ್ಲಿಕೆ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊನ್ನೆ ಹೇಳಿಕೆ ಕೊಟ್ಟಿದ್ದಾರೆ. ಇವರು ಮನೆ ಮನೆ ಸಮೀಕ್ಷೆ ಸರಿಯಾಗಿ ಮಾಡಿಲ್ಲ. ಜಾತಿಗಣತಿ ಸಮೀಕ್ಷೆ ಲೋಪದೋಷದಿಂದ ಕೂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.