spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್ ಕೊಟ್ಟ ಓಲಾ: 10 ಸಾವಿರ ಮಂದಿ ನೇಮಕಕ್ಕೆ ಮುಂದಾದ ಕಂಪನಿ!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ತಮಿಳುನಾಡಿನಲ್ಲಿ ಓಲಾ ಕಂಪನಿಯು ಕಾರ್ಖಾನೆ ನಿರ್ಮಾಣ ಮಾಡುತ್ತಿದ್ದು, ಇಲ್ಲಿ ಸಂಪೂರ್ಣ ಮಹಿಳಾ ಉದ್ಯೋಗಿಯೇ ಕೆಲಸ ನಿರ್ವಹಿಸಲಿದ್ದಾರೆ ಎಂದು ಓಲಾ ಅಧ್ಯಕ್ಷ ಹಾಗೂ ಓಲಾ ಗ್ರೂಪ್​ ಸಿಇಓ ಭವೀಶ್​ ಅಗರ್​ವಾಲ್​ ಘೋಷಣೆ ಮಾಡಿದ್ದಾರೆ.
ಓಲಾದ ಭವಿಷ್ಯದ ಈ ಕಾರ್ಖಾನೆಯು ಮಹಿಳೆಯರ ಅತಿದೊಡ್ಡ ಕಾರ್ಖಾನೆಯಾಗಿರಲಿದೆ. ಆತ್ಮ ನಿರ್ಭರ ಭಾರತಕ್ಕೆ ಆತ್ಮನಿರ್ಭರ ಸ್ತ್ರೀಯರ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
500 ಎಕರೆ ವಿಸ್ತೀರ್ಣದಲ್ಲಿ ಈ ಕಾರ್ಖಾನೆ ನಿರ್ಮಾಣವಾಗುತ್ತಿದ್ದು, ಇಲ್ಲಿ 10 ಸಾವಿರ ಮಹಿಳೆಯರಿಗೆ ಉದ್ಯೋಗವನ್ನು ಕಲ್ಪಿಸಲಾಗುತ್ತದೆ.
ತಮಿಳುನಾಡಿನಲ್ಲಿ ಮೊದಲ ಎಲೆಕ್ಟ್ರಿಕ್​ ಸ್ಕೂಟರ್ ಕಾರ್ಖಾನೆಯನ್ನು ತೆರೆಯಲು 2400 ಕೋಟಿ ರೂಪಾಯಿ ಹೂಡಿಕೆ ಮಾಡಿರುವುದಾಗಿ ಕಳೆದ ವರ್ಷ ಓಲಾ ಕಂಪನಿಯು ಹೇಳಿತ್ತು.
ಕಂಪನಿಯು ಆರಂಭದ ಹಂತದಲ್ಲಿ 10 ಲಕ್ಷ ವಾರ್ಷಿಕ ಉತ್ಪಾದನಾ ಸಾಮರ್ಥ್ಯದ ಮೇರೆಗೆ ಕಾರ್ಯನಿರ್ವಹಿಸಲಿದೆ. ಹಾಗೂ ಬಳಿಕ ಈ ಉತ್ಪಾದನಾ ಸಾಮರ್ಥ್ಯವನ್ನು 20 ಲಕ್ಷಕ್ಕೆ ಏರಿಕೆ ಮಾಡುವುದಾಗಿ ಕಂಪನಿ ಹೇಳಿತ್ತು. ಬಳಿಕ ವಾರ್ಷಿಕ 1 ಕೋಟಿ ಉತ್ಪಾದನಾ ಸಾಮರ್ಥ್ಯವನ್ನು ಪೂರೈಸುವ ಗುರಿಯನ್ನು ಕಂಪನಿ ಹೊಂದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss