spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವೃದ್ಧೆಯ ಮೇಲೆ ಮಾರಣಾಂತಿಕ ಹಲ್ಲೆ, ಚಿನ್ನ ದೋಚಿದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಶಿವಮೊಗ್ಗ :

ವೃದ್ಧೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ 10 ಗ್ರಾಂ ಚಿನ್ನ ಹಾಗೂ 3 ಸಾವಿರ ರೂ. ದೋಚಿದ್ದ ಇಬ್ಬರು ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಗೋಪಾಳ ನಿವಾಸಿ ನಿತಿನ್ ಎಸ್. ಶೆಟ್ಟಿ(32) ಹಾಗೂ ಮೈಸೂರು ನಗರದ ಹುಣಸೂರು ಮುಖ್ಯ ರಸ್ತೆ ನಿವಾಸಿ ಶಿವು (36) ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ ಒಂದು ರೋಲ್ಡ್ ಗೋಲ್ಡ್ ಸರ, ಒಂದು ಸಾವಿರ ರೂ. ನಗದು, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಹಕ್ಲು ಗ್ರಾಮದ ಭವಾನಿ (85 ) ಎಂಬುವರ ಮೇಲೆ ಜೂ.9ರಂದು ಮೇಲೆ ಹಲ್ಲೆ ಮಾಡಿ ನಗ, ನಗದು ದೋಚಿದ್ದರು. ತೀವ್ರ ಗಾಯಗೊಂಡ ಇವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.
ಪ್ರಕರಣ ಭೇದಿಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಇವರು ಉಡುಪಿ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ದೇವಸ್ಥಾನದ ಹುಂಡಿ ಕಳ್ಳತನ, ಹಾಗೂ ಶಿವಮೊಗ್ಗದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss