ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಈ ಹಿನ್ನೆಲೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕೇಂದ್ರದ ನಾಯಕರಿಗೆ ಪತ್ರ ಬರೆದಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ಅರ್ಜುನ್ ರಾಮ್ ಮೇಘವಾಲ್ ಹಾಗೂ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ರಿಗೂ ಪತ್ರ ಬರೆದು ಸಂಪುಟ ನಿರ್ಧಾರವನ್ನು ಮರು ಪರಿಶೀಲನೆಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರವಾಗಿ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸುಳ್ಳು ಕೇಸ್ ಇದ್ದಿದ್ದರಿಂದ ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದಾರೆ. ಹೋರಾಟ ಮಾಡಿದಾಗ ಕೇಸ್ ಹಾಕಿದ್ದರೆ ವಾಪಸ್ ತೆಗೆದುಕೊಳ್ಳುವ ಅವಕಾಶವಿದೆ. ಕೋರ್ಟ್ ಅವಕಾಶ ಕೊಟ್ಟರೆ ಮಾತ್ರ ಕೇಸ್ ಹಿಂಪಡೆಯುತ್ತೇವೆ. ನಮ್ಮ ಕ್ಯಾಬಿನೆಟ್ ನಿರ್ಧಾರವನ್ನು ನ್ಯಾಯಾಲಯಕ್ಕೆ ತಿಳಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದರು.