ಗುಂಡೇಟಿಗೆ ವೃದ್ಧ ಬಲಿ: ಸೊಸೆಯಿಂದಲೇ ಕೃತ್ಯ ಎಸಗಿರುವ ಶಂಕೆ !

ಹೊಸದಿಗಂತ ವರದಿ ಸೋಮವಾರಪೇಟೆ :

ಗುಂಡೇಟಿಗೆ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಕಿಕ್ಕರಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಕೆ.ಎ.ಮಂದಣ್ಣ (73) ಎಂಬವರೇ ಮೃತ ವ್ಯಕ್ತಿಯಾಗಿದ್ದು, ಸೊಸೆಯಿಂದಲೇ ಈ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಆರೋಪಿ ನೀಲಮ್ಮ ಅಲಿಯಾಸ್‌ (ಜ್ಯೋತಿ, 28) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಕೆಯ ಪತಿ ನಾಣಯ್ಯ ಅವರೇ ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣ ಎಂದು ಹೇಳಲಾಗಿದೆ.

ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!