ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಯಚೂರಿನಲ್ಲಿ ಕೆಲ ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ಮೃತಪಟ್ಟ ದುರ್ಘಟನೆಯ ನೆನಪು ಮಾಸುವ ಮುನ್ನವೇ ಈಗ ಕೊಪ್ಪಳ ಜಿಲ್ಲೆಯ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 65ರ ವೃದ್ಧೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ಕಳೆದ ಸೋಮವಾರ ರಾತ್ರಿ ನಡೆದಿದೆ. 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಲುಷಿತ ನೀರು ಸೇವಿಸಿ ಓರ್ವ ವೃದ್ಧೆ ಮೃತಪಟ್ಟಿದ್ದು, ಮೃತ ಮಹಿಳೆಯನ್ನು ಹೊನ್ನಮ್ಮ ಶಿವಪ್ಪ (65ವ) ಎಂದು ಗುರುತಿಸಲಾಗಿದೆ. 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.

ಕಲುಷಿತ ನೀರು ಸೇವನೆಯಿಂದ ಬಸರಿಹಾಳ ಗ್ರಾಮದ ಜನರು ಸುಮಾರು ಮೂರು ದಿನಗಳಿಂದ ವಾಂತಿ- ಬೇದಿಯಿಂದ ಬಳಲುತ್ತಿದ್ದಾರೆ. ಅವರೆಲ್ಲರೂ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಸ್ವಸ್ಥರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಲುಷಿತ ನೀರು ಪೂರೈಕೆ ಮಾಡಿದ ಗ್ರಾಮ ಪಂಚಾಯತ್ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!