ದೇಶದ ಅತೀ ಹಿರಿಯ ಸಾಕ್ಷರತಾ ವಿದ್ಯಾರ್ಥಿನಿ ಕೇರಳದ ಕಾರ್ತ್ಯಾಯಿನಿ ಅಮ್ಮ ಇನ್ನಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದ ಅತೀ ಹಿರಿಯ ವಿದ್ಯಾರ್ಥಿನಿ ಎಂಬ ಹೆಸರು ಪಡೆದಿದ್ದ ಕಾರ್ತ್ಯಾಯಿನಿ ಅಮ್ಮ ವಿಧಿವಶರಾಗಿದ್ದಾರೆ.

ಕೇರಳ ರಾಜ್ಯದ ಸಾಕ್ಷರತಾ ಮಿಷನ್‌ ಯೋಜನೆ ಅಡಿಯಲ್ಲಿ ನಡೆದ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದ, ನಾರಿಶಕ್ತಿ ಪುರಸ್ಕೃತರಾದ ಕಾರ್ತ್ಯಾಯಿನಿ ಅಮ್ಮ ಅವರು ಇಂದು ಮುಂಜಾನೆ ಕೇರಳದ ಆಳಪ್ಪುಳ ಜಿಲ್ಲೆಯ ಚೆಪ್ಪಾಡ್‌ ಗ್ರಾಮದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಕಾರ್ತ್ಯಾಯಿನಿ ಅಮ್ಮನವರಿಗೆ 101 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಪಾರ್ಶ್ವವಾಯುವಿಗೆ ತುತ್ತಾಗಿದ್ದು, ಕೆಲ ದಿನಗಳಿಂದ ಹಾಸಿಗೆ ಹಿಡಿದಿದ್ದರು ಎಂದು ವರದಿಯಾಗಿದೆ.

ಕಾರ್ತ್ಯಾಯಿನಿ ಅಮ್ಮ 96ನೇ ವಯಸ್ಸಿನಲ್ಲಿ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ‘ಅತಿ ಹಿರಿಯ ವಿದ್ಯಾರ್ಥಿ’ ಎಂಬ ಖ್ಯಾತಿ ಪಡೆದರು. ಅಲ್ಲದೆ ನಾಲ್ಕನೇ ತರಗತಿಗೆ ಸಮಾನವಾದ ‘ಅಕ್ಷರಲಕ್ಷಂ’ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿದ್ದರು. ಈ ಹಿನ್ನೆಲೆಯಲ್ಲಿ 2020ರ ಮಾರ್ಚ್‌ನಲ್ಲಿ ಮಹಿಳಾ ದಿನದಂದು ಆಗಿನ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಂದ ನಾರಿಶಕ್ತಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

ಕಾರ್ತಾಯಿನಿ ಅಮ್ಮ ಅವರ ಸಾವಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!