ಹೊಸದಿಗಂತ ಡಿಜಿಟಲ್ ಡೆಸ್ಕ್:
ಟ್ರಿನಿಡಾಡ್ ಮತ್ತು ಟೊಬಾಗೊ ದೇಶದ ಒಲಿಂಪಿಯನ್ ಡಿಯೋನ್ ಲೆಂಡೋರ್ ಅವರು ಅಮೆರಿಕದ ಟೆಕ್ಸಾಸ್ ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವಿಶ್ವ ಅಥ್ಲೀಟಿಕ್ಸ್, ಕ್ರೀಡಾ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಡಿಯೋನ್ ಅವರು 400 ಮೀಟರ್ ಓಟಗಾರರಾಗಿದ್ದು, 2020ರ ಟೋಕಿಯೋ ಒಲಿಂಪಿಕ್ಸ್ ಸೇರಿದಂತೆ ಮೂರು ಬಾರಿ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದರು. 2012ರ 4*400 ಮೀಟರ್ ಓಟದಲ್ಲಿ ಕಂಚಿನ ಪದಕ ಗಳಿಸಿದ್ದರು. 2015ರಲ್ಲಿ ಬೀಜಿಂಗ್ ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್ ನಲ್ಲಿ ದಿಯೋನ್ ಬೆಳ್ಳಿ ಪದಕ ಗೆದ್ದಿದ್ದರು. ವಿಶ್ವ ಇಂಡೋರ್ ಚಾಂಪಿಯನ್ ಶಿಪ್ ಲಿಮಾ 2019ರಲ್ಲಿ ಕಂಚಿನ ಪದಕ ಗಳಿಸಿದ್ದರು.
29 ವರ್ಷದ ಡಿಯೋನ್ ಅವರ ಅಕಾಲಿಕ ಮರಣ ಕ್ರೀಡಾ ಕ್ಷೇತ್ರಕ್ಕೆ ಅಪಾರವಾದ ನಷ್ಟ ಉಂಟಾಗಿದೆ ಎಂದು ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.