September 29, 2026
Tuesday, September 29, 2026
spot_img

ರಾಗಾ ಜತೆ ಓಂ ಬಿರ್ಲಾ ನಡೆದುಕೊಂಡ ರೀತಿ ಸರಿಯಿಲ್ಲ: ಸಲೀಂ ಅಹ್ಮದ

ಹೊಸದಿಗಂತ ವರದಿ ಹುಬ್ಬಳ್ಳಿ:

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜೊತೆಗೆ ನಡೆದುಕೊಂಡ ರೀತಿ ಸಂವಿಧಾನಕ್ಕೆ ವಿರೋಧವಾಗಿದೆ. ಸ್ಪೀಕರ್ ಅವರು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ರಾಹುಲ್ ಗಾಂದಿ ಅವರಿಗೆ ಮಾತನಾಡಲು ಅವಕಾಶ ನೀಡಿಲ್ಲ. ಸ್ಪೀಕರ್ ಹುದ್ದೆ ಅಲಂಕರಿಸಿದವರು ಯಾವುದೇ ಪಕ್ಷಕ್ಕೆ ಸೀಮಿತವಾಗಿರಬಾರದು. ಪಕ್ಷಾತೀತವಾಗಿ ನಡೆದುಕೊಳ್ಳಬೇಕು. ರಾಹುಲ್ ಗಾಂಧಿ ಅವರು ಸ್ಪೀಕರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಂಡಿದ್ದಾರೆ ಎಂದರು.

ಶಾಸಕ, ಸಚಿವರ ವಿದೇಶ ಪ್ರವಾಸದ ಬಗ್ಗೆ ಮಾತನಾಡಿದ ಅವರು, ನಾನಂತೂ ವಿದೇಶ ಪ್ರವಾಸಕ್ಕೆ ಹೊರಟಿಲ್ಲ. ಯಾರಾದರೂ ಹೊರಟಿದ್ದರೆ ಅದು ಅವರ ವೈಯಕ್ತಿಕ ಖರ್ಚಿನಲ್ಲಿ ಹೊರಟಿರಬಹುದು. ಬಜೆಟ್ ಬಳಿಕ ಅಽಕಾರ ಹಸ್ತಾಂತರ ಆಗಲ್ಲ. ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ತಿಳಿಸಿದರು.

Must Read