ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್‌ನಲ್ಲಿ ಇಂದು ಟೀಂ ಇಂಡಿಯಾ -ಒಮಾನ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಈ ಹಿಂದೆ, ಭಾರತ ತಂಡ ಯುಎಇ ಮತ್ತು ಪಾಕಿಸ್ತಾನವನ್ನು ಸೋಲಿಸುವ ಮೂಲಕ ಸೂಪರ್ ಫೋರ್‌ನಲ್ಲಿ ಸ್ಥಾನ ಪಡೆದುಕೊಂಡಿತ್ತು.
ಯುಎಇ ಮತ್ತು ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ ತಂಡ ಏಷ್ಯಾಕಪ್ ಸೂಪರ್ ಫೋರ್‌ನಲ್ಲಿ ಸ್ಥಾನ ಪಡೆದುಕೊಂಡಿದೆ. ಈಗ, ಅಂತಿಮ ಲೀಗ್ ಪಂದ್ಯದಲ್ಲಿ ಒಮಾನ್ ತಂಡವನ್ನು ಸೋಲಿಸುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸುವ ಇರಾದೆಯಲ್ಲಿದೆ. ಭಾರತ ಮತ್ತು ಒಮಾನ್ ಮೊದಲ ಬಾರಿಗೆ ಏಷ್ಯಾಕಪ್‌ನಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಈ ಟೂರ್ನಮೆಂಟ್‌ನಲ್ಲಿ ಒಮಾನ್ ತನ್ನ ಎರಡೂ ಪಂದ್ಯಗಳನ್ನು ಸೋತಿದ್ದು, ತನ್ನ ಮೊದಲ ಸೀಸನ್‌ನಲ್ಲಿ ಏಷ್ಯಾಕಪ್‌ನಿಂದ ಹೊರಬಿದ್ದಿದೆ. ಈಗ, ಭಾರತದ ವಿರುದ್ಧ ಉತ್ತಮ ಪ್ರದರ್ಶನ ನೀಡುವ ಮೂಲಕ ಈ ಟೂರ್ನಮೆಂಟ್‌ಗೆ ಬಲವಾದ ವಿದಾಯ ಹೇಳಲು ನೋಡುತ್ತಿದೆ.