ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಕೊರೋನಾ ಜೊತೆಗೆ ಒಮಿಕ್ರಾನ್ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಜನರಲ್ಲಿ ಮತ್ತಷ್ಟು ಆತಂಕ ಶುರುವಾಗಿದೆ.
ಈಗಾಗಲೇ ಮಾರ್ಗಸೂಚಿ ಜಾರಿಗೊಳಿಸಲಾಗಿದ್ದು, ಆದರೆ ಇದೀಗ ಗೃಹ ಇಲಾಖೆ ಇಲಾಖೆ ಕೂಡ ಮಹತ್ವದ ನಿರ್ಧಾರ ಕೈಗೊಂಡಿದೆ.
ಅದೇನೆಂದರೆ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ 50 ರಿಂದ 60 ವರ್ಷದೊಳಗಿನ ಮುಂಬೈ ಪೊಲೀಸರಿಗೆ ವರ್ಕ್ ಫ್ರಮ್ ಹೋಮ್ ನೀಡಲು ಇಲಾಖೆ ಮುಂದಾಗಿದೆ. ಈ ಮೂಲಕ ಅವರಿಗೆ ವಿವಿಧ ಜನಸಂದಣಿ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ಹಾಜರಾಗದಂತೆ ಪೊಲೀಸ್ ಮಹಾ ನಿರೀಕ್ಷಕ ಎಂ. ರಾಮಕುಮಾರ್ ಸೂಚಿಸಿದ್ದಾರೆ.
ಪ್ರಮುಖವಾಗಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಪೊಲೀಸರು ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮುಂಬೈ ಪೊಲೀಸ್ ಇಲಾಖೆ ಸಿಬ್ಬಂದಿಗೆ ತಿಳಿಸಲಾಗಿದೆ.