ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಆತಂಕ: ಎಲ್ಲೆಡೆ ಕಠಿಣ ರೂಲ್ಸ್ ಜಾರಿ, ಥಿಯೇಟರ್‌ಗಳಲ್ಲಿ 50% ಜನರಿಗೆ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್

ಮಹಾರಾಷ್ಟ್ರದಲ್ಲಿ ಕೊರೋನಾ ಜೊತೆಗೆ ಒಮಿಕ್ರಾನ್ ಹೆಚ್ಚುತ್ತಿದ್ದು, ಈ ಹಿನ್ನೆಲೆ ಸರ್ಕಾರ ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿಗೆ ಆದೇಶಿಸಿದ್ದು, ಕೆಲವು ನಿರ್ಬಂಧಗಳನ್ನು ವಿಧಿಸಿದೆ.
ಮುಖ್ಯವಾಗಿ ಸಾರ್ವಜನಿಕ ಸ್ಥಳಗಳಾದ ಬೀಚ್‌ಗಳು, ಉದ್ಯಾನಗಳು ಮತ್ತು ಬೀದಿಗಳಲ್ಲಿ ಸಾಮಾಜಿಕ ಅಂತರ ಮತ್ತು ನಿಯಮಿತ ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು. ರೆಸ್ಟೊರೆಂಟ್‌ಗಳು, ಜಿಮ್‌ಗಳು ಮತ್ತು ಸಿನಿಮಾ ಥಿಯೇಟರ್‌ಗಳಲ್ಲಿ 50 % ರಷ್ಟು ಜನರಿಗೆ ಮಾತ್ರವೇ ಪ್ರವೇಶಾವಕಾಶ ನೀಡಲಾಗಿದೆ.
ಅದೇರೀತಿ ಮದುವೆಗಳು, ಸಾಮಾಜಿಕ, ರಾಜಕೀಯ ಅಥವಾ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ, ಪಾಲ್ಗೊಳ್ಳುವವರ ಗರಿಷ್ಠ ಸಂಖ್ಯೆಯನ್ನು 50 ವ್ಯಕ್ತಿಗಳಿಗೆ ಸೀಮಿತಗೊಳಿಸಲಾಗಿದೆ. ಜನರು, ಮುಖ್ಯವಾಗಿ ಹಿರಿಯ ನಾಗರಿಕರು ಮತ್ತು ಮಕ್ಕಳು ಹೆಚ್ಚಾಗಿ ಮನೆಯಲ್ಲಿಯೇ ಇರಬೇಕು ಎಂದು ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!