ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಒಮಿಕ್ರಾನ್ ಆತಂಕ ಶುರುವಾಗಿದ್ದು, ಈ ನಡುವೆ ಶಾಲಾ- ಕಾಲೇಜುಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮತ್ತಷ್ಟು ಭೀತಿ ಹುಟ್ಟಿಸಿದೆ. ಹೀಗಾಗಿ ಮತ್ತೆ ಶಾಲೆ ಕಾಲೇಜು ಬಂದ್ ಮಾಡುವಂತೆ ಒತ್ತಾಯಗಳು ಕೇಳಿಬರುತ್ತಿದೆ.
ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ . ಸಿ . ನಾಗೇಶ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲಾ ಕಾಲೇಜು ಬಂದ್ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಒಮಿಕ್ರಾನ್ ಭೀತಿ ಬಗ್ಗೆ ಪೋಷಕರಲ್ಲಿ ಯಾವುದೇ ಆತಂಕ ಬೇಡ, ಎಂದಿನಂತೆ ತರಗತಿಗಳು ನಡೆಯುತ್ತದೆ. ಮೂರನೇ ಅಲೆ ಹಾಗೂ ಒಮಿಕ್ರಾನ್ ಬಗ್ಗೆ ಮಾಹಿತಿ ಪಡೆಯಲಾಗಿದೆ. ಶಾಲಾ ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ. ಪೋಷಕರಿಗೆ ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯವಾಗಿದೆ. ಶಾಲಾ ಕಾಲೇಜು ಬಂದ್ ಬಗ್ಗೆ ಯಾವುದೇ ಗೊಂದಲ ಬೇಡ, ಧೈರ್ಯವಾಗಿ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ, ನಿಮ್ಮ ಪರವಾಗಿ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಕೆಲಸ ಮಾಡುತ್ತಿದೆ ಎಂದರು.
ಶಾಲೆಗಳಲ್ಲಿ ಹೊಸ ಮಾರ್ಗಸೂಚಿ ನಿರ್ವಹಣೆ ಬಗ್ಗೆ ಡಿಸೆಂಬರ್ 9 ರಂದು ಬಿ . ಸಿ . ನಾಗೇಶ್ ಅವರು ತಾಂತ್ರಿಕ ಸಲಹಾ ಸಮಿತಿ ತಜ್ಞರು , ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ .
ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸುವಂತೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ .