Wednesday, July 6, 2022

Latest Posts

ಓಮಿಕ್ರಾನ್ ಆತಂಕ: ಭಾರತಕ್ಕೆ ಬರುವ ಈ ದೇಶಗಳ ಪ್ರಯಾಣಿಕರಿಗೆ ಕೋವಿಡ್‌ ಟೆಸ್ಟ್ ಕಡ್ಡಾಯ

ಹೊಸ ದಿಗಂತ ಡಿಜಿಟಲ್‌ ಡೆಸ್ಕ್:

ಡೆಲ್ಟಾಗಿಂತ ಬಲಿಷ್ಠವಾದ ಕೋವಿಡ್‌ ರೂಪಾಂತರಿ ಬಿ.1.1.529 ಓಮಿಕ್ರಾನ್ ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ದೇಶಗಳಲ್ಲಿ  ಪತ್ತೆಯಾಗಿದ್ದು, ಈ ಹಿನ್ನೆಲೆ ಕೇಂದ್ರ ಸರ್ಕಾರವು ಕೆಲ ನಿರ್ದಿಷ್ಟ ದೇಶಗಳಿಂದ ಆಗಮಿಸುವವರಿಗೆ ಕೊರೋನಾ ಪರೀಕ್ಷೆ ಕಡ್ಡಾಯಗೊಳಿಸಿದೆ.

ಯಾವೆಲ್ಲ ದೇಶಗಳು?

ದಕ್ಷಿಣ ಆಫ್ರಿಕಾ, ಬ್ರೆಜಿಲ್‌, ಬಾಂಗ್ಲಾದೇಶ, ಐರೋಪ್ಯ ರಾಷ್ಟ್ರಗಳು, ಬೋಟ್ವಾನಾ, ಚೀನಾ, ಮಾರಿಷಸ್‌, ನ್ಯೂಜಿಲೆಂಡ್‌, ಜಿಂಬಾಬೆ, ಸಿಂಗಾಪುರ, ಹಾಂಗ್‌ಕಾಂಗ್‌, ಇಸ್ರೆಲ್‌ ದೇಶದಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯ ಕೊರೋನಾ ಪರೀಕ್ಷೆ ಸೇರಿದಂತೆ, ಹೆಚ್ಚುವರಿ ಕ್ರಮ ಅನುಸರಿಸುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಓಮಿಕ್ರಾನ್ ಈಗಾಗಲೇ ದಕ್ಷಿಣ ಆಫ್ರಿಕಾದ ಬೋಟ್ಸ್‌ವಾನ್‌, ಹಾಂಗ್‌ಕಾಂಗ್‌ಗಲ್ಲಿ, ಇಸ್ರೇಲ್‌ ಮತ್ತು ಬೆಲ್ಜಿಯಂನಲ್ಲಿ ಕಾಣಿಸಿಕೊಂಡಿದ್ದು, ಇದು ತತ್‌ಕ್ಷಣಕ್ಕೆ ಹಾಗೂ ವೇಗವಾಗಿ ಪ್ರಸರಿಸುವ  ಭಯಾನಕ ರೂಪಾಂತರಿಯಾಗಿದೆ.

ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೋಟ್ಸ್​ವಾನಾ ಸೇರಿದಂತೆ 12 ದೇಶಗಳಿಂದ ಬರುವ ಪ್ರಯಾಣಿಕರನ್ನು ಕಟ್ಟುನಿಟ್ಟಿನ ತಪಾಸಣೆ ಹಾಗೂ ಪರೀಕ್ಷೆಗೆ ಒಳಪಡಿಸುವಂತೆ  ಆದೇಶ ಹೊರಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss