Wednesday, June 29, 2022

Latest Posts

ಕಠಿಣ ನಿಬಂಧನೆಗಳ ನಡುವೆಯೂ 13 ರಾಷ್ಟ್ರಗಳಿಗೆ ಹಬ್ಬಿದ ಒಮಿಕ್ರಾನ್ ವೈರಸ್! ಇಲ್ಲಿದೆ ಪಟ್ಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಒಮಿಕ್ರಾನ್ ವೈರಸ್ ಇದೀಗ ವಿಶ್ವದ ಇತರ 12 ರಾಷ್ಟ್ರಗಳಿಗೆ ವ್ಯಾಪಿಸುತ್ತಿರುವ ಬಗ್ಗೆ ಬ್ಲೂಮ್ ಬರ್ಗ್ ವರದಿ ತಿಳಿಸಿದೆ.
ಗಡಿಗಳಲ್ಲಿನ ತೀವ್ರ ಕಟ್ಟೆಚ್ಚರ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ನಡುವೆಯೂ ಕೊರೋನಾ ಸೋಂಕಿನ ಹೊಸ ಪ್ರಭೇದ ಒಮಿಕ್ರಾನ್ ವಿಶ್ವದಾದ್ಯಂತ ಹಬ್ಬುತ್ತಿರುವುದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.
ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಬೆಲ್ಜಿಯಂ, ಬೋಟ್ಸ್ ವಾನಾ, ಬ್ರಿಟನ್, ಕೆನಡಾ, ಡೆನ್ಮಾರ್ಕ್, ಫ್ರಾನ್ಸ್, ಜರ್ಮನಿ, ಹಾಂಕಾಂಗ್, ಇಸ್ರೇಲ್, ಇಟಲಿ ಮತ್ತು ನೆದರ್​ಲ್ಯಾಂಡ್ ರಾಷ್ಟ್ರಗಳಲ್ಲಿ ಈ ಸೋಂಕು ವ್ಯಾಪಕವಾಗಿ ಪತ್ತೆಯಾಗಿದೆ. ಈ ಒಮಿಕ್ರಾನ್ ವೈರಸ್ ವೇಗಗತಿ ಅರಿತ ವಿಶ್ವ ಆರೋಗ್ಯ ಸಂಸ್ಥೆ, ಇದನ್ನು ಅತಿ ಹೆಚ್ಚು ಅಪಾಯಕಾರಿ (Very High Risk) ಸೋಂಕು ಎಂದು ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಕೂಡ ಒಮಿಕ್ರಾನ್ ವೈರಸ್ ತಡೆಗೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯಕ್ಕೆ ಪ್ರವೇಶಿಸುವ ಕೇರಳ ಹಾಗೂ ಮಹಾರಾಷ್ಟ್ರದ ಜನರಿಗೆ ಕಟ್ಟುನಿಟ್ಟಿನ ತಪಾಸಣೆ ಮಾಡಲಾಗುತ್ತಿದೆ. ಇನ್ನು ಕಳೆದ 10-12 ದಿನಗಳಿಂದ ಅಂತಾರಾಷ್ಟ್ರೀಯ ವಿಮಾನದ ಮೂಲಕ ರಾಜ್ಯಕ್ಕೆ ಬಂದವರ ಮೇಲೆಯೂ ತೀವ್ರ ನಿಗಾವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಆದರೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss