ಒಮಿಕ್ರಾನ್‌ ರೂಪಾಂತರಿಯ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ: ಸಿಎಂಗಳಿಗೆ ಪ್ರಧಾನಿ ಮೋದಿ ಸಲಹೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಎಲ್ಲ ರಾಜ್ಯಗಳು,ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಸಭೆ ನಡೆಸಿದರು.

ಈ ವೇಳೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಒಮಿಕ್ರಾನ್‌ ಸೋಂಕು ದಿನೇ ದಿನೇ ಹೆಚ್ಚಾಗಿ ಹರಡುತ್ತಿದೆ. ಆದರೆ ಸೋಂಕಿನಿಂದ ಆತಂಕ ಪಡುವ ಆಗತ್ಯವಿಲ್ಲ. ಕೇಂದ್ರ, ರಾಜ್ಯ ಸರ್ಕಾರಗಳು ಒಮಿಕ್ರಾನ್‌ ನಿಯಂತ್ರಿಸಲು ಕ್ರಮ ಕೈಗೊಂಡಿದೆ. ಈ ಮೂಲಕ ಕೊರೋನಾ ರೂಪಾಂತರಿ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿದೆ ಎಂದರು.

ಹಿಂದಿನ ರೂಪಾಂತರಿಗಳಿಗೆ ಹೋಲಿಸಿದರೆ ಒಮಿಕ್ರಾನ್ ವೇಗವಾಗಿ ಹರಡುತ್ತಿದೆ. ನಮ್ಮ ಆರೋಗ್ಯ ತಜ್ಞರು ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ. ನಾವು ಎಚ್ಚರಿಕೆ ವಹಿಸಬೇಕಾಗಿದೆ ಎಂದು ಪ್ರಧಾನಿ ತಿಳಿಸಿದರು.

ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ ಎಂದು ದೇಶ ನಿವಾಸಿಗಳಿಗಳಿಗೆ ಪ್ರಧಾನಿ ಮೋದಿ ಸಲಹೆ ನೀಡಿದ್ದು, ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆಗೆ ಆದ್ಯತೆ ನೀಡಿ. ಈ ಹೋಂ ಐಸೋಲೇಷನ್‌ನಲ್ಲಿ ಟ್ರ್ಯಾಕಿಂಗ್‌, ಟ್ರೀಟ್‌ಮೆಂಟ್‌ ಅನುಸರಿಸಿ. ಇನ್ನು ಕೇಂದ್ರ ಸರ್ಕಾರದ ಟೆಲಿ ಮೆಡಿಸನ್‌ ಸೌಲಭ್ಯ ಒದಗಿಸಿದೆ. ಕೋವಿಡ್‌ ಸೋಂಕಿತರಿಗೆ ಈ ಟೆಲಿ ಮೆಡಿಸನ್‌ ಸೌಲಭ್ಯ ಸಹಕಾರಿಯಾಗಿದೆ ಎಂದರು.

ಕೇಂದ್ರ ಸರಕಾರ ಎಲ್ಲ ರಾಜ್ಯಗಳ ಜೊತೆ ಸಹರಿಸಲುಸಿದ್ಧವಿದೆ. ಕೊರೋನಾ ನಿಯಂತ್ರಣಕ್ಕೆ ಭಾರತದಲ್ಲಿ ಅತ್ಯುನ್ನತ ಸಿದ್ಧತೆಗಳನ್ನ ತೆಗೆದುಕೊಳ್ಳಲಾಗ್ತಿದೆ. 2 ವರ್ಷಗಳ ಅನುಭವದ ಮೇಲೆ ನಿಭಾಹಿಸುತ್ತಿದ್ದೇವೆ. ಸ್ಥಳೀಯವಾಗಿ ಕಂಟೋನ್ಮೆಂಟ್‌ ನಿಯಮ ಕಡ್ಡಾಯವಾಗಿ ಪಾಲಿಸಿ ಎಂದರು.

ಶೇ.90ರಷ್ಟು ಜನ 2ನೇ ಡೋಸ್‌ ಲಸಿಕೆ ಪಡೆದಿದ್ದಾರೆ. 15 ವರ್ಷದ ಮೇಲ್ಪಟ್ಟ 3 ಕೋಟಿ ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಫ್ರಂಟ್‌ಲೈನ್‌ ವರ್ಕಸ್‌, ಹಿರಿಯರಿಗೆ ಬೂಸ್ಟರ್‌ ಡೋಸ್‌ ನೀಡಲಾಗ್ತಿದೆ. ಸಾಂಪ್ರದಾಯಿಕ, ಮನೆ ಔಷಧಗಳು ಉಪಯೋಗಕಾರಿ. ಇಂತಹ ಸಂದರ್ಭದಲ್ಲಿ ಆಯುರ್ವೇದ ಪದ್ದತಿ ಸಹಕಾರಿ ಎಂದು ಹೇಳಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಂವಾದದಲ್ಲಿ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಮುನ್ಸೂಖ್ ಮಾಂಡವೀಯಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!