Sunday, June 26, 2022

Latest Posts

ಉತ್ತರಪ್ರದೇಶದಲ್ಲಿ ಒಮಿಕ್ರಾನ್‌ ಭೀತಿ: ಡಿ.25ರಿಂದ ನೈಟ್‌ ಕರ್ಫ್ಯೂ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೋವಿಡ್‌ ರೋಪಾಂತರಿ ಸೋಂಕು ಒಮಿಕ್ರಾನ್‌ ಭೀತಿಗೆ ಉತ್ತರಪ್ರದೇಶದ ಯೋಗಿ ಆದಿತ್ಯನಾಥರ ಸರ್ಕಾರ ಡಿ.25ರಿಂದ ನೈಟ್‌ ಕರ್ಫ್ಯೂ ಜಾರಿಗೊಳಿಸಿದೆ.
ಇಂದು ಬೆಳಗ್ಗೆ ಲಕ್ನೋದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಡಿ.25ರಿಂದ ರಾಜ್ಯದ 75 ಜಿಲ್ಲೆಗಳಲ್ಲಿ ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.
ಉತ್ತರ ಪ್ರದೇಶದಲ್ಲಿ ಇನ್ನುಮುಂದೆ ಮದುವೆ ಸಮಾರಂಭಗಳಲ್ಲಿ 200ಕ್ಕೂ ಹೆಚ್ಚು ಜನ ಸೇರುವಂತಿಲ್ಲ ಎಂದು ಯೋಗಿ ಸರ್ಕಾರ ತಿಳಿಸಿದೆ.
ರಸ್ತೆಗಳಲ್ಲಿ, ಮಾರುಕಟ್ಟೆ, ಅಂಗಡಿಗಳಲ್ಲಿ ಮಾಸ್ಕ್‌ ಇಲ್ಲದಿದ್ದರೆ ದಿನಸಿ ಸಾಮಾಗ್ರಿ ಇಲ್ಲ ಎಂದು ಬೋರ್ಡ್‌ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ವಿದೇಶದಿಂದ ರಾಜ್ಯಕ್ಕೆ ಬರುವವರ ಬಗ್ಗೆ ನಿಗಾ ವಹಿಸಲು ಹಾಗೂ ರೈಲು ನಿಲ್ದಾಣಮ ವಿಮಾನ ನಿಲ್ದಾಣ, ಬಸ್‌ ನಿಲ್ದಾಣಗಳಲ್ಲಿ ಹೆಚ್ಚಿನ ಜಾಗೃತಿ ವಹಿಸಲು ಯೋಗಿ ಆದಿತ್ಯನಾಥ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ  122 ಓಮೈಕ್ರಾನ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ಓಮೈಕ್ರಾನ್ ಸೋಂಕಿತರ ಸಂಖ್ಯೆ 358ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ 114 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss