ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ರೂಪಾಂತರಿ: ಗಡಿ ದಾಟದಂತೆ ಕರ್ನಾಟಕದಲ್ಲಿ ಹದ್ದಿನಕಣ್ಣು

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಮಹಾರಾಷ್ಟ್ರದಲ್ಲಿ ಕೋವಿಡ್ ಒಮಿಕ್ರಾನ್ ರೂಪಾಂತರಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಭಾಗ ಸೇರಿದಂತೆ ರಾಜ್ಯದಲ್ಲಿ ಅರೋಗ್ಯ ಇಲಾಖೆ ವ್ಯಾಪಕ ಕಣ್ಗಾವಲಿರಿಸಿದೆ. ಈ ಬಗ್ಗೆ ನಾಗರಿಕರಿಗೂ ಅಲರ್ಟ್ ಇರುವಂತೆ ಇಲಾಖೆ ಸೂಚಿಸಿದ್ದು, ಹವಾನಿಯಂತ್ರಣ ವ್ಯವಸ್ಥೆ ಇರುವ ಒಳಾಂಗಣ, ಅಗತ್ಯ ಗಾಳಿ-ಬೆಳಕಿಲ್ಲದಿರುವ ಸ್ಥಳಗಳು, ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳು ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದೆ.

ಹಬ್ಬಗಳನ್ನು ಸಾಧ್ಯವಾದಷ್ಟು ಹೊರಾಂಗಣಗಳಲ್ಲಿ ಆಚರಿಸಬೇಕು. ಜನ ದಟ್ಟಣೆಯ ಪ್ರದೇಶಗಳಿಂದ ದೂರವಿರಬೇಕು ಎಂದು ಇಲಾಖೆ ನಾಗರಿಕರಲ್ಲಿ ಮನವಿ ಮಾಡಿಕೊಂಡಿದೆ.

ಕೋವಿಡ್ ಮುನ್ನೆಚ್ಚರಿಕೆ ಲಸಿಕೆ ಡೋಸ್ ಪಡೆಯಲು ಬಾಕಿ ಇರುವವರು ತಕ್ಷಣ ಪಡೆದುಕೊಳ್ಳಬೇಕು. ಇನ್ನು 60 ವರ್ಷ ಮೇಲ್ಪಟ್ಟವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಕೂಡಾ ಶೀಘ್ರವೇ ಲಸಿಕೆಯನ್ನು ಪಡೆಯಬೇಕು. ಜೀವ ನಿರೋಧಕ ಕಡಿಮೆ ಇರುವವರು, ಡಯಾಲಿಸಿಸಿ ಮಾಡಿಸಿಕೊಳ್ಳುವವರು ಮತ್ತು ಕ್ಯಾನ್ಸರ್ ನಿರೋಧಕ ಔಷಧಿಗಳನ್ನು ಸೇವಿಸುತ್ತಿರುವವರು ತಮ್ಮ ವೈದ್ಯರೊಂದಿಗೆ ಸಮಾಲೋಚನೆ ನಂತರ ಆದ್ಯತೆಯ ಮೇಲೆ ಕೋವಿಡ್-19 ಲಸಿಕೆ ಪಡೆದುಕೊಳ್ಳಬೇಕೆಂದು ಇಲಾಖೆ ತಿಳಿಸಿದೆ.

ಕೋವಿಡ್ ಮುನ್ನೆಚ್ಚರಿಕೆ ಕ್ರಮ ಕಟ್ಟುನಿಟ್ಟಾಗಿ ಪಾಲಿಸಬೇಕು. ಮಡಚಿದ ಮೊಣಕೈ ಒಳಗೆ ಕೆಮ್ಮುವುದು ಹಾಗೂ ಸೀನುವುದು. ಕರವಸ್ತ್ರ, ಟಿಶ್ಯೂ ಪೇಪರ್ ನ ಬಳಕೆ, ಸಾರ್ವಜನಿಕ ಸ್ಥಳಗಳಲ್ಲಿ ಮೂಗನ್ನು ಶುಚಿಗೊಳಿಸದಿರುವುದು, ಉಗುಳದಿರುವುದು. ಕೈಗಳನ್ನು ಸೋಪ್ ನಿಂದ ತೊಳೆಯುವುದು ಹಾಗೂ ಸೋಂಕಿನ ಲಕ್ಷಣಗಳನ್ನು ಹೊಂದಿದವರ ಸಂಪರ್ಕದಿಂದ ದೂರವಿರುವ ಕ್ರಮಗಳನ್ನು ಪಾಲಿಸಬೇಕೆಂದು ಇಲಾಖೆ‌ ಇದೇ ಸಂದರ್ಭ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!