Sunday, March 26, 2023

Latest Posts

ಸರ್ವವ್ಯಾಪಿ, ಸರ್ವಸ್ಪರ್ಷಿ ಐತಿಹಾಸಿಕ ಜನಪರ ಬಜೆಟ್: ಸಚಿವ ಕೋಟ

ಹೊಸ ದಿಗಂತ ವರದಿ, ಕಾರವಾರ:

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಸರ್ವವ್ಯಾಪಿ, ಸರ್ವಸ್ಪರ್ಷಿ ಐತಿಹಾಸಿಕ ಜನಪರ ಬಜೆಟ್ ಆಗಿದ್ದು , ಕರಾವಳಿ ಜಿಲ್ಲೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಕ್ಕೆ ಯೋಜನೆಗಳ ಸಿಂಹಪಾಲು ದೊರಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.
ಕಾರವಾರದಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಜೆಟ್ ನಲ್ಲಿ ಬಡವರು, ಹಿಂದುಳಿದ ವರ್ಗದವರು, ರೈತರನ್ನು ಗಮನದಲ್ಲಿರಿಸಿ ಯೋಜನೆಗಳನ್ನು ರೂಪಿಸಲಾಗಿದ್ದು ಅತ್ಯಂತ ಶೀಘ್ರದಲ್ಲಿ ಬಜೆಟ್ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದರು.
ಕಾಳಿ ನದಿ ನೀರನ್ನು ಉತ್ತರ ಕರ್ನಾಟಕದ ಭಾಗಗಳಿಗೆ ಪೂರೈಸುವ ಯೋಜನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ಅದೊಂದು ಸುದುದ್ದೇಶದ ಯೋಜನೆಯಾಗಿದ್ದು ಅದರ ಸಾಧಕ ಬಾಧಕಗಳ ಕುರಿತು ಚರ್ಚಿಸಿದ ನಂತರವೇ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುವುದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮೊದಲು ಆದ್ಯತೆ ನೀಡಲಾಗುವುದು ಎಂದ ಸಚಿವ ಪೂಜಾರಿ ಕಾಳಿ ನದಿ ನಿರಾಶ್ರಿತರ ಸಭೆಯನ್ನು ಕರೆದು ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!