ತೊರೆನೂರಿನಲ್ಲಿ ಕರುವಿನ ಮೇಲೆ ಚಿರತೆ ದಾಳಿ

ಹೊಸ ದಿಗಂತ ವರದಿ, ಕುಶಾಲನಗರ:

ಚಿರತೆಯೊಂದು ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಗುರುವಾರ ಸಂಜೆ ತೊರೆನೂರು ಗ್ರಾಮದಲ್ಲಿ ನಡೆದಿದೆ.
ತೊರೆನೂರು ಗ್ರಾಮದಿಂದ ಭೈರಪ್ಪನಗುಡಿ- ಅಳುವಾರಕ್ಕೆ ಹೋಗುವ ಮಾರ್ಗದಲ್ಲಿರುವ ತೊರೆನೂರು ಸಹಕಾರ ಸಂಘದ ನಿರ್ದೇಶಕ ಟಿ.ಜಿ.ಲೋಕೇಶ್ ಎಂಬವರು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಸಂಜೆ 6 ಗಂಟೆ ಸುಮಾರಿಗೆ ದಾಳಿ ನಡೆಸಿದ ಚಿರತೆ ಅದನ್ನು ಕೊಂದು ತಿಂದು ಹಾಕಿದೆ.
ಕಳೆದ ರಾತ್ರಿ ಅಳುವಾರ ಮತ್ತು ಅರಗಲ್ಲು ಗ್ರಾಮದಲ್ಲಿಯೂ ಚಿರತೆ ಹಸುಗಳ ಮೇಲೆ ದಾಳಿ ಮಾಡಿ ಕೊಂದು ತಿಂದಿರುವುದಾಗಿ ಹೇಳಲಾಗಿದೆ. ಅರಣ್ಯ ಇಲಾಖೆಯವರು ತುರ್ತು ಕ್ರಮಕೈಕೊಳ್ಳಬೇಕೆಂದು ಈ ಭಾಗದ ರೈತರು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here