ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಮೇಲಿರುವ ಹಲವು ಆರೋಪಕ್ಕೆ ಸಂಬಂಧಿಸಿದಂತೆ ಆ.೨೩ರಂದು ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಗುತ್ತಿಗೆದಾರರ ಕಮಿಷನ್, ವರ್ಗಾವಣೆ ದಂಧೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿಯಾಗುತ್ತಿಲ್ಲ. ಪಂಚ ಯೋಜನೆಗಳು ಹೆಸರಿಗಷ್ಟೇ ಹಣ ಇನ್ನು ಜನರ ಕೈಗೆ ತಲುಪಿಲ್ಲ, ಆಗಲೇ ಸ್ಕೀಮ್ ಮುಚ್ಚುವ ಮಾತನಾಡ್ತಿದ್ದಾರೆ. ಮೂರೇ ತಿಂಗಳಲ್ಲಿ ಕಾಂಗ್ರೆಸ್ ಹಣೆಬರಹ ಏನೆಂದು ಜನರಿಗೆ ಗೊತ್ತಾಗಿದೆ. ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯದ ಆರ್ಥಿಕತೆಯನ್ನು ಕಾಂಗ್ರೆಸ್ ಮುಳುಗಿಸುತ್ತಿದೆ. ಈ ಸರ್ಕಾರ ಡಿಕ್ಟೇಟರ್‌ಶಿಪ್ ನಂಬಿದಂತೆ ಕಾಣುತ್ತಿದೆ ಎಂದಿದ್ದಾರೆ.