ಯುವತಿಯನ್ನು ಕೆಳಕ್ಕೆ ತಳ್ಳಿ ಅಮಾನುಷ ಹಲ್ಲೆ: ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಸ್ನೇಹಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಯುವತಿಯನ್ನು ಓರ್ವ ಯುವಕ ಹಿಗ್ಗಾಮುಗ್ಗ ಥಳಿಸಿದ್ದಾನೆ. ಕೆಳಕ್ಕೆ ತಳ್ಳಿ ಆಕೆ ಮುಖಕ್ಕೆ ಕಾಲಿನಿಂದ ಒದ್ದಿರುವ ಭೀಕರ ದೃಶ್ಯಗಳು ಇವೆ. ಮಧ್ಯಪ್ರದೇಶ ರಾಜ್ಯದ ರೇವಾ ಜಿಲ್ಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ. ಈ ಕುರಿತು ಮಾಹಿತಿ ಪಡೆದ ರೇವಾ ಪೊಲೀಸರು ದಾಳಿ ನಡೆಸಿದ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಕಾರ, ಆಕೆ ರೇವಾ ಜಿಲ್ಲೆಯ ಮೌಗಂಜ್ ಪ್ರದೇಶಕ್ಕೆ ಸೇರಿದವರಾಗಿದ್ದು, ಮದುವೆಯಾಗುವಂತೆ ಕೇಳಿದ್ದಕ್ಕೆ ಯುವತಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೆಲ ದಿನಗಳಿಂದ ಇಬ್ಬರೂ ಪ್ರೀತಿಸುತ್ತಿದ್ದರು ಎಂಬ ವದಂತಿ ಹಬ್ಬಿದ್ದು, ಇತ್ತೀಚೆಗೆ ಮದುವೆಯಾಗುವಂತೆ ಯುವತಿ ಒತ್ತಡ ಹೇರಿದ್ದರಿಂದ ಈ ರೀತಿ ಹಲ್ಲೆ ನಡೆಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ರೇವಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿವೆಲ್ ಲಾಲ್  ”ವೀಡಿಯೋ ಆಧರಿಸಿ ಆರೋಪಿಯನ್ನು ಬಂಧಿಸಿದ್ದೇವೆ. ಆಯಾ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಸಂತ್ರಸ್ತೆಯಿಂದಲೂ ದೂರು ಪಡೆದಿದ್ದೇವೆ. ವೀಡಿಯೋ ತೆಗೆದ ಸ್ನೇಹಿತನನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ,’’ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!