ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆಗಳ ಮೇಲಿನ ಸಸ್ಪೆನ್ಸ್ಗೆ ಡಿಸೆಂಬರ್ 14 ರಂದು ತೆರೆ ಬೀಳಲಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ರಚನೆ ಡಿಸೆಂಬರ್ 14 ರಂದು ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಖಚಿತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಫಡ್ನವೀಸ್ ಬುಧವಾರ ಸಂಜೆ ದೆಹಲಿಗೆ ತೆರಳಿ ರಾಜ್ಯ ಬಿಜೆಪಿ ನಾಯಕ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.