ಮಂಡ್ಯದಲ್ಲಿ ಡಿ.30 ರಂದು ‘ಅಮಿತ್ ಶಾ’ ಬೃಹತ್ ಸಮಾವೇಶ : ಸ್ವಾಗತಕ್ಕೆ ಬಿಜೆಪಿಯಿಂದ ಭರ್ಜರಿ ಸಿದ್ದತೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಡಿ.30 ರಂದು ಮಂಡ್ಯದಲ್ಲಿ ‘ಅಮಿತ್ ಶಾ’ ಬೃಹತ್ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿಯಿಂದ ಭರ್ಜರಿ ಸಿದ್ದತೆ ನಡೆದಿದೆ.

ಅಮಿತ್ ಶಾ ಅವರ ಸ್ವಾಗತಕ್ಕೆ ಭರ್ಜರಿ ಸಿದ್ದತೆ ಮಾಡಲಾಗುತ್ತಿದ್ದು, ಮಂಡ್ಯದ ಸರ್ಕಾರಿ ಮಹಾ ವಿದ್ಯಾಲಯದಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ. ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ಇಬ್ಬರು ಸಚಿವರಿಗೆ ಕಾರ್ಯಕ್ರಮದ ಉಸ್ತುವಾರಿ ಜವಾಬ್ದಾರಿ ನೀಡಲಾಗಿದ್ದು, ಸಚಿವ ಕೆ. ಗೋಪಾಲಯ್ಯ ಹಾಗೂ ನಾರಾಯಣ ಗೌಡರು ಅಮಿತ್ ಶಾ ಕಾರ್ಯಕ್ರಮದ ಜವಾಬ್ದಾರಿ ಹೊತ್ತಿದ್ದಾರೆ. ಮಂಡ್ಯದಲ್ಲಿ ಶಾ ಸಮಾವೇಶಕ್ಕಾಗಿ ಬೃಹತ್ ಪೆಂಡಾಲ್ ಹಾಕಿಸಲಾಗಿದೆ.

ಮಂಡ್ಯದಲ್ಲಿ ಡಿಸೆಂಬರ್ 30ರಂದು 1 ಲಕ್ಷ ಜನರ ಬೃಹತ್ ಸಮಾವೇಶವನ್ನು ಪಕ್ಷ ಆಯೋಜಿಸಿದ್ದು, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಹಾಸನಗಳ ಜನರು ಮಂಡ್ಯದ ಸಮಾವೇಶದಲ್ಲಿ ಭಾಗವಹಿಸುವರು. ಅಮಿತ್ ಶಾ ಅವರ ಭೇಟಿಯಿಂದ ಬಿಜೆಪಿ ಬಲ ಹೆಚ್ಚಲಿದೆ. ಈ ಸಮಾವೇಶ 30ರ ಮಧ್ಯಾಹ್ನ ಒಂದು ಗಂಟೆಗೆ ನಡೆಯಲಿದೆ ಎಂದು ತಿಳಿಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!