Tuesday, March 28, 2023

Latest Posts

ಫೆ.23ಕ್ಕೆ ಸಂಡೂರಿನಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಬೃಹತ್‌ ಸಮಾವೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ಚುನಾವಣೆ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಜೀ ಅವರು, ಫೆ.23 ರಂದು ಗಣಿನಾಡು ಬಳ್ಳಾರಿ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಸಂಡೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಡೂರು ತಾಲೂಕಿನ ತೋರಣಗಲ್ಲು ಪಟ್ಟಣದಲ್ಲಿ ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಪ್ರಮುಖರ ಜೊತೆ ಗೃಹ ಸಚಿವರು ಸಭೆ ನಡೆಸಲಿದ್ದಾರೆ ಎಂದರು.

ಸಂಡೂರಿನಲ್ಲಿ ಆಯೋಜಿಸಿದ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ನಮ್ಮ ಸರ್ಕಾರದ ಅನೇಕ ಸಚಿವರು ಸಮಾವೇಶದಲ್ಲಿ ಭಾಗವಹಿಸಲಿದ್ದು, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!