Sunday, March 26, 2023

Latest Posts

ಫೆ.25ರಂದು ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವ : ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಫೆಬ್ರವರಿ 25 ರಂದು ಸಂಜೆ 5 ಗಂಟೆಗೆ ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಅವರ ‘ಏಕ್ ಭಾರತ್ ಶ್ರೇಷ್ಠ ಭಾರತ್’‌ ದೃಷ್ಟಿಕೋನಕ್ಕೆ ಅನುಗುಣವಾಗಿ, ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಆಚರಿಸಲು ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಜಾದಿ ಕಾ ಅಮೃತ್ ಮಹೋತ್ಸವದ ಆಶ್ರಯದಲ್ಲಿ ನಡೆಯುತ್ತಿರುವ ಈ ಉತ್ಸವವು ನೂರಾರು ಕಲಾವಿದರಿಗೆ ನೃತ್ಯ, ಸಂಗೀತ, ನಾಟಕ, ಕಾವ್ಯ ಇತ್ಯಾದಿಗಳ ಮೂಲಕ ಕರ್ನಾಟಕ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸುತ್ತುರುವುದು ವಿಶೇಷ ಸಂಗತಿ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!