ಹೊಸದಿಗಂತ ವರದಿ, ಶಿವಮೊಗ್ಗ:
ಜ.22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಜನ್ಮಭೂಮಿಯಲ್ಲಿ ಶ್ರೀ ರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿದೆ. ಈ ಕಾರಣದಿಂದ ತೀರ್ಥಹಳ್ಳಿಯ ರಥಬೀದಿಯಲ್ಲಿರುವ ಶ್ರೀ ಕೋದಂಡರಾಮನ ದೇವಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ.
ಕಲ್ಲಾರೆ ಗಣಪತಿ ದೇವಸ್ಥಾನದ ಬಳಿ ಪಾನಕ ವಿತರಣೆ ಕೂಡ ಇರಲಿದೆ. ಅಂದು ಮಧ್ಯಾಹ್ನ 12 ಗಂಟೆಗೆ ಶ್ರೀಕೋದಂಡಸ್ವಾಮಿಗೆ ಮಹಾಮಂಗಳಾರತಿ ಜರುಗಲಿದೆ. ಈ ಪೂಜೆಗೆ ಪ್ರತಿಯೊಬ್ಬರು ಭಾಗವಹಿಸಿ ಎಂದು ಮನವಿ ಮಾಡಿದರು.
ಶುಕ್ರವಾರ ತೀರ್ಥಹಳ್ಳಿ ಪಟ್ಟಣದ ಗಾಂಧಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಸದಸ್ಯರಿಗೂ ಈ ಪೂಜೆಗೆ ಆಹ್ವಾನ ನೀಡುತ್ತಿದ್ದೇನೆ. ಶನಿವಾರ, ಭಾನುವಾರ ಶ್ರಮದಾನ ಮಾಡಿ ದೇವಸ್ಥಾನ ಹಾಗೂ ಆವರಣಗಳನ್ನು ಸುಣ್ಣ ಬಣ್ಣ ಬಳಿದು ಸ್ವಚ್ಛತೆ ನಡೆಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪಟ್ಟಣ ಪಂಚಾಯತ್ ಸಹಕಾರ ಕೂಡ ಕೇಳಿದ್ದೇವೆ. 2 ಕೋಟಿ ವೆಚ್ಚದಲ್ಲಿ ಪೌಳಿ ಮಾಡಿಸಿ ದೇವಸ್ಥಾನ ಅಭಿವೃದ್ಧಿಗೆ ಏನು ಮಾಡಬೇಕೋ ಅದಕ್ಕೆ ಪ್ರಯತ್ನ ಮಾಡುತ್ತೇವೆ ಎಂದರು.