Friday, July 1, 2022

Latest Posts

ಆ.15ರಂದು ನಿಸರ್ಗ ಜೇಸಿಸ್ ಕೆಸರುಗದ್ದೆ ಕ್ರೀಡಾಕೂಟ-2021: ಕೋವಿಡ್ ನಿಯಮ ಪಾಲಿಸಿ ಕೊಳತೋಡಿನಲ್ಲಿ ಆಯೋಜನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ,  ಪೊನ್ನಂಪೇಟೆ:

ಜೆ.ಸಿ.ಐ. ಪೊನ್ನಂಪೇಟೆ ನಿಸರ್ಗ (ನಿಸರ್ಗ ಜೇಸಿಸ್) ವತಿಯಿಂದ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ದಿನ ಬಿಟ್ಟಂಗಾಲ ಸಮೀಪದ ಕೊಳತೋಡಿನಲ್ಲಿ 7ನೇ ವರ್ಷದ ‘ನಿಸರ್ಗ ಜೇಸಿಸ್ ಮುಕ್ತ ಕೆಸರುಗದ್ದೆ ಕ್ರೀಡಾಕೂಟ-2021’ ಅನ್ನು ಆಯೋಜಿಸಲಾಗಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜೆ.ಸಿ.ಐ. ಪೊನ್ನಂಪೇಟೆ ನಿಸರ್ಗ ಘಟಕದ ಅಧ್ಯಕ್ಷರಾದ ಎಂ.ಎನ್. ವನಿತ್ ಕುಮಾರ್ ಅವರು, ವಿರಾಜಪೇಟೆ-ಗೋಣಿಕೊಪ್ಪಲು ಮುಖ್ಯ ರಸ್ತೆಯ ಬದಿಯಲ್ಲಿರುವ ಕೊಳತೋಡಿನ ಮುರುವಂಡ ಸುಬ್ರಮಣಿ ಅವರ ಭತ್ತದ ಗದ್ದೆಯಲ್ಲಿ ಈ ಕೆಸರುಗದ್ದೆ ಕ್ರೀಡಾಕೂಟ ಜರುಗಲಿದೆ. ಈ ಕ್ರೀಡಾಕೂಟದಲ್ಲಿ ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು. ಕೋವಿಡ್ ಲಸಿಕೆ ಪಡೆದ ಕ್ರೀಡಾಪಟುಗಳಿಗೆ ಮಾತ್ರ ಕ್ರೀಡಾಕೂಟದಲ್ಲಿ ಪಾಲ್ಗೊಳಲು ಅವಕಾಶ ನೀಡಲಾಗುವುದು. ಸರಕಾರದ ಆದೇಶದಂತೆ ಈ ಬಾರಿ ಕ್ರೀಡಾಕೂಟಕ್ಕೆ ಪ್ರೇಕ್ಷಕರನ್ನು ಅವಲಂಬಿಸದಿರಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕ್ರೀಡಾಕೂಟದಲ್ಲಿ 18 ವರ್ಷ ಪ್ರಾಯ ಪೂರ್ತಿಯಾದ ಮಹಿಳೆಯರಿಗೆ ಮತ್ತು ಪುರುಷರಿಗೆ ಮುಕ್ತ ಕೆಸರುಗದ್ದೆ ಓಟದ ಸ್ಪರ್ಧೆ ಸೇರಿದಂತೆ ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಸ್ಪರ್ಧೆ ಹಾಗೂ ಪುರುಷರ ಫುಟ್ಬಾಲ್ ಪಂದ್ಯಾವಳಿಯನ್ನು ಮಾತ್ರ ಆಯೋಜಿಸಲಾಗಿದೆ. ಹಗ್ಗ ಜಗ್ಗಾಟ ತಂಡದಲ್ಲಿ ತಲಾ 9 ಜನರಿಗೆ ಮತ್ತು ಪುಟ್ಬಾಲ್ ತಂಡದಲ್ಲಿ ತಲಾ 7 ಜನರಿಗೆ ಮಾತ್ರ ಅವಕಾಶವಿರುತ್ತದೆ.

ಕ್ರೀಡಾಕೂಟ ಆಯೋಜಿಸುವ ಸಂಸ್ಥೆಯ ನಿರ್ಬಂಧಗಳಿಗೆ ಬದ್ಧರಾಗಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಬಯಸುವ ತಂಡಗಳು ಆಗಸ್ಟ್ 10ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕ್ರೀಡಾಕೂಟದ ಯೋಜನಾ ನಿರ್ದೇಶಕರಾದ ಕುಪ್ಪಂಡ ದಿಲನ್ ಬೋಪಣ್ಣ 9481883738 ಅಥವಾ ಅಧ್ಯಕ್ಷರನ್ನು 9880504208 ಸಂಪರ್ಕಿಸಬಹುದಾಗಿದೆ ಎಂದು ವನಿತ್ ಕುಮಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss