Wednesday, February 8, 2023

Latest Posts

ಪ್ರಧಾನಿ ಮೋದಿ ನೇತೃದಲ್ಲಿ ಜ.19ರಂದು ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ : ಶಾಸಕ ಪಿ. ರಾಜೀವ

ಹೊಸದಿಗಂತ ವರದಿ ವಿಜಯಪುರ :

ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜ. 19 ರಂದು ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿ ಹಕ್ಕುಪತ್ರ ನೀಡಲಾಗುತ್ತದೆ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಪಿ. ರಾಜೀವ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು,
ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್ ಮತ್ತು ಕಲಬುರಗಿ ಗಡಿಭಾಗದ ತಾಂಡಾ ಸೇರಿ ಒಟ್ಟು 50 ಸಾವಿರ ಹಕ್ಕುಪತ್ರ ನೀಡಲಾಗುತ್ತದೆ. 250 ಕ್ಕೂ ಅಧಿಕ ತಾಂಡಾಗಳು ಕಂದಾಯ ಗ್ರಾಮಗಳಾಗಿ ಘೋಷಿಸಲಾಗುತ್ತಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಿರಲಿಲ್ಲ. ಹೀಗಾಗಿ ಇದೊಂದು ದೊಡ್ಡ ಸವಾಲಾಗಿತ್ತು. ಈವರೆಗೂ ಯಾವುದೇ ಸರ್ಕಾರ ಈ ಬಗ್ಗೆ ಗಮನ ಹರಿಸಿರಲಿಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!