Friday, July 1, 2022

Latest Posts

ಜೂ.11, 12 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಜಿಲ್ಲಾ ಪ್ರವಾಸ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಶಿವಮೊಗ್ಗ:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜೂನ್ 11 ಮತ್ತು 12 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.
ಜೂನ್ 11 ರ ಮಧ್ಯಾಹ್ನ 12.45 ಕ್ಕೆ ಹಾಸನ ಜಿಲ್ಲೆಯ ಭುವನಹಳ್ಳಿ ಹೆಲಿಪ್ಯಾಡ್‌ನಿಂದ ಹೊರಟು ಮಧ್ಯಾಹ್ನ 1.30 ಕ್ಕೆ ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದ ಹತ್ತಿರದ ಹೆಲಿಪ್ಯಾಡ್‌ಗೆ ಆಗಮಿಸುವರು. ಸಂಜೆ 4 ಗಂೆಗೆ ಶಿಕಾರಿಪುರ ತಾಪಂ ಸಭಾಂಗಣದಲ್ಲಿ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು.
ಜೂನ್ 12 ರ ಮಧ್ಯಾಹ್ನ 3.30 ಕ್ಕೆ ಶಿಕಾರಿಪುರದಿಂದ ಹೊರಟು ಶಿವಮೊಗ್ಗ ನಗರಕ್ಕೆ ಆಗಮಿಸಿ, ಸಂಜೆ 4 ಗಂೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಶಿವಮೊಗ್ಗ ಜಿಲ್ಲಾ ಕೋವಿಡ್-19 (ಕೊರೊನಾ ವೈರಸ್) ಹಾಗೂ ಇತರೆ ಅಭಿವೃದ್ದಿ ವಿಷಯಗಳ ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು ಎಂದು ಮುಖ್ಯಮಂತ್ರಿಂುವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಬಿ.ಪಿ.ಚನ್ನಬಸವೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss