ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸ ದಿಗಂತ ವರದಿ, ಮಡಿಕೇರಿ:
ಜಿಲ್ಲೆಯಲ್ಲಿ ಮೇ 14 ಮತ್ತು 15 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನಲೆಯಲ್ಲಿ ನಗರದ ಇಂದಿರಾನಗರ, ಚಾಮುಂಡೇಶ್ವರಿ ನಗರ ಹಾಗೂ ಇತರರ ಪ್ರದೇಶಗಳಲ್ಲಿ ವಾಸಿಸುವ ಅಪಾಯ ಸ್ಥಿತಿಯಲ್ಲಿರುವ ಮನೆಗಳು, ಎತ್ತರದ ಪ್ರದೇಶಗಳ ಮನೆಗಳು ಮತ್ತು ಇಳಿಜಾರು ಬೆಟ್ಟದ ಕೆಳಗೆ ಇರುವ ಮನೆಗಳು, ಮರಗಳ ಕೆಳಭಾಗದಲ್ಲಿ ಇರುವ ಮನೆಗಳಲ್ಲಿ ವಾಸವಿರುವ ಕುಟುಂಬದವರು ಸುರಕ್ಷತೆ ದೃಷ್ಟಿಯಿಂದ ಮಳೆಗಾಲದ ಅವಧಿಯಲ್ಲಿ ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ನಗರಸಭೆ ಪೌರಾಯುಕ್ತ ರಾಮದಾಸ ಅವರು ಕೋರಿದ್ದಾರೆ.