Friday, June 2, 2023

Latest Posts

ಬೀದರ್ ಗೆ ಖರ್ಗೆ, ಪ್ರಿಯಾಂಕಾ: ಅಭ್ಯರ್ಥಿ ಪರ ಚುನಾವಣಾ ಪ್ರಚಾರ

ಹೊಸ ದಿಗಂತ ವರದಿ, ಬೀದರ್:

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಬೀದರ್ ಜಿಲ್ಲೆಗೆ ಮೇ 2 ರಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮೇ 3 ರಂದು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.

ಮೇ 2 ರಂದು ಬೆಳಿಗ್ಗೆ 11.30ಕ್ಕೆ ಭಾಲ್ಕಿ ಪಟ್ಟಣದ ಖಂಡ್ರೆ ಗಲ್ಲಿಯಲ್ಲಿ ಭಾಲ್ಕಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಈಶ್ವರ ಖಂಡ್ರೆ ಪರ, ಮಧ್ಯಾಹ್ನ 2.30ಕ್ಕೆ ಬಸವಕಲ್ಯಾಣದ ತೇರು ಮೈದಾನದಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಸಿಂಗ್ ಹಾಗೂ ಸಂಜೆ 5.30ಕ್ಕೆ ಹುಮನಾಬಾದ್ ಪಟ್ಟಣದಲ್ಲಿ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶಾಸಕ ರಾಜಶೇಖರ ಪಾಟೀಲ ಪರ ಚುನಾವಣಾ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮೇ 3 ರಂದು ಮಧ್ಯಾಹ್ನ 3ಕ್ಕೆ ಪ್ರಿಯಾಂಕಾ ಗಾಂಧಿ ಅವರು ಬೀದರ್ ತಾಲ್ಲೂಕಿನ ಬಗದಲ್‍ನ ಮೋರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುವರು.
ಎಐಐಸಿ ಕಾರ್ಯದರ್ಶಿ ಶ್ರೀಧರ ಬಾಬು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಪಾಲ್ಗೊಳ್ಳಲಿದ್ದಾರೆ.
ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮತದಾರರು ಪ್ರಚಾರ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!