ಹಳೆ ವಿದ್ಯಾರ್ಥಿಗಳ ‘ಸ್ನೇಹ ಮಿಲನ’ಕ್ಕೆ ಸಜ್ಜಾಗುತ್ತಿದೆ ಮುಡಿಪು ಶ್ರೀ ಭಾರತಿ ಅನುದಾನಿತ ಶಾಲೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಂಟ್ವಾಳ ತಾಲೂಕಿನ ಮುಡಿಪು ಶ್ರೀ ಭಾರತಿ ಅನುದಾನಿತ ಶಾಲೆಯ ಹಳೆ ವಿದ್ಯಾರ್ಥಿಗಳ ‘ಸ್ನೇಹ ಮಿಲನ’ಎಂಬ ವಿಶಿಷ್ಟ ಕಾರ್ಯಕ್ರಮ ನ.6ರಂದು ಬೆಳಗ್ಗೆ 9.30ರಿಂದ ಭಾರತಿ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.

ಮುಡಿಪು ಭಾರತಿ ಶಾಲೆ 1948ರಲ್ಲಿ ಸ್ಥಾಪನೆಯಾಗಿದ್ದು, ಮುಂದಿನ ವರ್ಷ 2023ರಲ್ಲಿ ಅಮೃತ ಮಹೋತ್ಸವ ಆಚರಿಸಲಿದೆ. ಈ ಹಿನ್ನೆಲೆಯಲ್ಲಿ ಕಳೆದ ಆ.15ರಂದು ಹೊಸದಾಗಿ ಹಳೆ ವಿದ್ಯಾರ್ಥಿಗಳ ಸಂಘ ಸ್ಥಾಪಿಸಲಾಗಿದೆ. ಬಳಿಕ ಸಾಮಾಜಿಕ ಜಾಲತಾಣ ಹಾಗೂ ಮನೆ ಮನೆ ಸಂಪರ್ಕ ಅಭಿಯಾನದ ಮೂಲಕ ಸಾಕಷ್ಟು ಹಳೆ ವಿದ್ಯಾರ್ಥಿಗಳ ಸಂಪರ್ಕ ಸಾಧಿಸಿದ್ದು, ಹಲವು ಮಂದಿಯನ್ನು ಸದಸ್ಯರನ್ನಾಗಿ ಸಂಘಕ್ಕೆ ಸೇರ್ಪಡೆಗೊಳಿಸಲಾಗಿದೆ. ಇದೀಗ ಹಳೆ ವಿದ್ಯಾರ್ಥಿಗಳ ಪುನರ್ ಮಿಲನ ಕಾರ್ಯಕ್ರಮದ ಭಾಗವಾಗಿ ಸ್ನೇಹ ಮಿಲನ ಸಮಾರಂಭ ಏರ್ಪಡಿಸಲಾಗಿದೆ.

ಸ್ನೇಹ ಮಿಲನ ಸಂದರ್ಭ ಹಳೆ ವಿದ್ಯಾರ್ಥಿಗಳ ಶಾಲೆಗೆ ಮತ್ತೆ ಆಗಮಿಸಿ, ಶಾಲಾ ದಿನಗಳ ಮೆಲುಕು ಹಾಕುವುದು, ಸಂಘದ ಸದಸ್ಯತ್ವ ಹೊಂದುವುದು, ಶಾಲೆಯ ಅಮೃತ ಮಹೋತ್ಸವ ಸಮಾರಂಭದ ಸಿದ್ಧತೆಗಳ ಬಗ್ಗೆ ಚರ್ಚಿಸುವುದು ಮತ್ತಿತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾರತಿ ಶಾಲೆಯಲ್ಲಿ ಕಲಿತ ಎಲ್ಲ ಹಳೆ ವಿದ್ಯಾರ್ಥಿಗಳು ನ.6ರಂದು ಶಾಲೆಗೆ ಆಗಮಿಸಿ ಶಾಲಾಡಳಿತದ ಈ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವಂತೆ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್, ಶಾಲೆಯ ಸಂಚಾಲಕ ಸುಬ್ರಹ್ಮಣ್ಯ ಭಟ್ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ನಿಶ್ಚಲ್ ಶೆಟ್ಟಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!