ನ.11ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ಸಿಎಂ ಬೊಮ್ಮಾಯಿ ಮಾಹಿತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಭೇಟಿ ನೀಡಲಿದ್ದು, ದಕ್ಷಿಣ ಭಾರತದಲ್ಲಿ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ ಎಕ್ಸ್‌ಪ್ರೆಸ್‍ಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಗಾಂಧಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ನವೆಂಬರ್ 11 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‍ನ ಉದ್ಘಾಟನೆ ಮಾಡಲಿದ್ದು, ಬಳಿಕ ಅದೇ ಆವರಣದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ ಅನಾವರಣ ಮಾಡಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಬೃಹತ್ ಸಭೆ ಆಯೋಜಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!