March 31, 2026
Tuesday, March 31, 2026
spot_img

ಒಂದು ಕಡೆ ಕಾಂಗ್ರೆಸ್ಸಿನವರ ಹಗಲು ದರೋಡೆ, ಮತ್ತೊಂದೆಡೆ ಡಕಾಯಿತರಿಂದ ರೋಡಲ್ಲೇ ಹಗಲು ದರೋಡೆ: ಆರ್.ಅಶೋಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬ್ರ್ಯಾಂಡ್ ಬೆಂಗಳೂರಿನ ಮತ್ತೊಂದು ಅವತಾರ ಬೆಂಗಳೂರು ದರೋಡೆಗಳ ನಗರ ಆಗುತ್ತಿದೆ. ಬೆಂಗಳೂರಿನಲ್ಲಿ 7 ನಿಮಿಷದಲ್ಲಿ 7 ಕೋಟಿ ಮೊತ್ತದ ದರೋಡೆ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್‌‌ ಟೀಕಿಸಿದರು.

ಇದು ಕರ್ನಾಟಕ ಸರ್ಕಾರದ ಹೊಸ ಸ್ಕೀಂ. ಇದು 5 ಗ್ಯಾರಂಟಿಗಳಂತಿದೆ, 7 ನಿಮಿಷದಲ್ಲಿ 7 ಕೋಟಿ ಪಡೆಯುವುದು ಹೇಗೆಂದು ಸರ್ಕಾರವು ಜನರಿಗೆ ತೋರಿಸಿದೆ. ಜನರು ಭಯಭೀತರಾಗಿದ್ದು, ಬ್ಯಾಂಕ್‍ಗಳ ಬಳಿ ಹೋಗಲು ಆತಂಕದಿಂದಿರುವಂಥ ಪರಿಸ್ಥಿತಿ ಬಂದಿದೆ ಎಂದು ಆರೋಪಿಸಿದರು.

ಹಾಡಹಗಲೇ ದರೋಡೆ ಸಾಧ್ಯವೇ ಎಂದ ಅವರು, ಬೆಂಗಳೂರಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸಿ.ಸಿ. ಟಿವಿ ಕ್ಯಾಮೆರಾಗಳಿವೆ. ಒಂದು ಲಕ್ಷಕ್ಕೂ ಹೆಚ್ಚು ಜನ ಪೊಲೀಸರಿದ್ದಾರೆ. ಕಮಿಷನರ್ ಕಚೇರಿ, ಮನೆ, ಡಿ.ಜಿ. ಕಚೇರಿ, ಮನೆ ಇಲ್ಲೇ ಇದೆ. ಮುಖ್ಯಮಂತ್ರಿಗಳ ಮನೆ, ಸ್ಪೆಷಲ್‌ ವ್ಯಕ್ತಿ, ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಮನೆ ಕೂಡ ಇಲ್ಲೇ ಇದೆ. ಒಂದು ಕಡೆ ಕಾಂಗ್ರೆಸ್ಸಿನವರ ಹಗಲು ದರೋಡೆ, ಇಲ್ಲಿ ಡಕಾಯಿತರಿಂದ ರೋಡಲ್ಲೇ ಹಗಲು ದರೋಡೆ. ಇದು ಕಾಕತಾಳೀಯ ಎಂಬಂತಿದೆ ಎಂದು ದೂರಿದರು.

ದರೋಡೆ ಮಾಡುವವರಿಗೆ ಕರ್ನಾಟಕ ಒಂದು ರೀತಿ ಸ್ವರ್ಗವಾಗಿದೆ. ಬೀದರ್, ಮಂಗಳೂರು ಬಳಿಕ ಈಗ ಬೆಂಗಳೂರಿಗೆ ಬಂದಿದೆ. ಅಲ್ಲಿ ಕೈಚಳಕ ತೋರಿಸುವುದೇನು? ಎಂಬಂತೆ ರಾಜಧಾನಿ ಬೆಂಗಳೂರಿನಲ್ಲಿ ಕೈಚಳಕ ತೋರಿಸಿದ್ದಾರೆ. ಸರ್ಕಾರ ಸತ್ತು ಹೋಗಿದೆ ಎಂದು ಜನರು ತಿಳಿದುಕೊಂಡಿದ್ದಾರೆ ಎಂದು ಟೀಕಿಸಿದರು. ಕುರ್ಚಿ ಗಲಾಟೆಗಾಗಿ ಮಂತ್ರಿಗಳು, ಮುಖ್ಯಮಂತ್ರಿ ಎಲ್ಲರೂ ದೆಹಲಿ ಕಡೆ ಮುಖ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಪೂರ್ತಿ ಹದಗೆಟ್ಟಿದೆ, ಸತ್ತು ಹೋಗಿದೆ ಎಂದು ಕಿಡಿಕಾರಿದರು.

24 ಗಂಟೆಯಲ್ಲಿ ಬಂಧಿಸಬೇಕು; ಸುಳಿವು ಸಿಕ್ಕಿದೆ ಎಂದು ಹೇಳಿದ್ದಾರೆ. ಆಗಲೇ ದರೋಡೆ ಆಗಿ 24 ಗಂಟೆ ಮುಗಿದು 26 ಗಂಟೆ ಆಗಿದೆ. ಸುಳಿವೆಲ್ಲ ಸಿಕ್ಕಿದ್ದರೆ ಯಾಕೆ ಬಂಧಿಸಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಕೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !