Sunday, August 14, 2022

Latest Posts

ಸೆ.10 ರಂದು ಶರಣಬಸವ ವಿಶ್ವವಿದ್ಯಾಲಯದ ಚೊಚ್ಚಲ ಘಟಿಕೋತ್ಸವ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಕಲಬುರಗಿ:

ಸೆಪ್ಟೆಂಬರ್ 10 ರಂದು ಕಲಬುರಗಿ ನಗರದಲ್ಲಿ ಗಣೇಶ ಚತುರ್ಥಿಯ ಶುಭ ದಿನದಂದು ಶರಣಬಸವ ವಿಶ್ವವಿದ್ಯಾಲಯದ ಮೊದಲ ಮತ್ತು ಎರಡನೇಯ ಘಟಿಕೋತ್ಸವ ನಡೆಯಲಿದೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ, 10 ರಂದು ಜರಗುವ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಕೇಂದ್ರ ಸರಕಾರದ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆಯ ರಾಜ್ಯ ಸಚಿವರಾದ ಶ್ರೀ ಭಗವಂತ ಖೂಬಾ ಒಪ್ಪಿಗೆ ನೀಡಿದ್ದಾರೆ.
ಈ ಘಟಿಕೋತ್ಸವವು ಕಲಬುರಗಿ ನಗರದ ಅಪ್ಪ ಪಬ್ಲಿಕ ಶಾಲೆ ಆವರಣದಲ್ಲಿ ಹೊಸದಾಗಿ ಮರುನಾಮಕರಣಗೊಂಡ ಪೂಜ್ಯ ಬಸವರಾಜಪ್ಪ ಅಪ್ಪ ಶತಮಾನೋತ್ಸವ ಭವನದಲ್ಲಿ ಏಕಕಾಲಕ್ಕೆ ಮೊದಲ ಮತ್ತು ಎರಡನೇ ಘಟಿಕೋತ್ಸವ ನಡೆಯಲಿದೆ ಎಂದರು.
ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಶರಣಪ್ಪ.ವಿ.ಹಲ್ಸೆ ಮತ್ತು ಗುಲಬರ್ಗಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ದಯಾನಂದ ಅಗಸರ ಕ್ರಮವಾಗಿ ಮೊದಲ ಮತ್ತು ಎರಡನೇಯ ಘಟಿಕೋತ್ಸವÀ ಭಾಷಣಗಳನ್ನು ಮಾಡುವರು ಎಂದು ಪೂಜ್ಯ ಅಪ್ಪಾಜಿ ಹೇಳಿದರು.
ಈ ಸಂದರ್ಭ ಕಲಬುರಗಿ ಲೋಕಸಭಾ ಸಂಸದ ಡಾ.ಉಮೇಶ ಜಾಧವ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಶ್ರೀ ದತ್ತಾತ್ರೇಯ ಪಾಟೀಲ ರೇವೂರ ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ತಿಳಿಸಿದರು. ಈ ಘಟಿಕೋತ್ಸವದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್‍ರಾದ ಪೂಜ್ಯ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಅವರು ಉಪಸ್ಥಿತರಿರುವರು.
ಶರಣಬಸವ ವಿಶ್ವವಿದ್ಯಾಲಯದ ಚೊಚ್ಚಲ ಘಟಿಕೋತ್ಸವವು ನಮಗೆ ಮತ್ತು ಶರಣಬಸವ ವಿಶ್ವವಿದ್ಯಾಲಯದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ವಿಶೇಷವಾಗಿ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಕನಸಿನ ಕೂಸಾಗಿದೆ ಮತ್ತು ಕಲ್ಯಾಣ ಕರ್ನಾಟಕದ ಎಲ್ಲಾ ಸಾಮಾನ್ಯ ಜನರಿಗೆ ಇದೊಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಪೂಜ್ಯ ಅಪ್ಪಾಜಿ ವಿವರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss