ಸೆ.12 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹೊಸ್ತಾರೋಗಣೆ: ದರುಶನದಲ್ಲಿ ವ್ಯತ್ಯಯ!

ಹೊಸದಿಗಂತ ವರದಿ, ಮಂಗಳೂರು:

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.12ರಂದು ಗುರುವಾರ ಹೊಸ್ತಾರೋಗಣೆ(ನವಾನ್ನ ಪ್ರಸಾದ) ನೆರವೇರಲಿದೆ. ಈ ನಿಮಿತ್ತ ಪ್ರಾತ:ಕಾಲ 5.15 ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 7.30 ಕ್ಕೆ ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಲಿರುವುದು. ಬೆಳಗ್ಗೆ 8 ರ ಬಳಿಕ ದೇವಳದ ನೌಕರರಿಗೆ ಮತ್ತು ಸ್ಥಳೀಯ ಭಕ್ತರಿಗೆ ಕದಿರು ವಿತರಣೆ ನಡೆಯಲಿದೆ.

ದರುಶನದಲ್ಲಿ ವ್ಯತ್ಯಯ
ಈ ದಿನ ಬೆಳಗ್ಗೆ 10 ಗಂಟೆಯ ನಂತರ ಶ್ರೀ ದೇವರ ದರುಶನಕ್ಕೆ ಅವಕಾಶ ಮಾಡಿಕೊಡಲಾಗುವುದು.ಅಲ್ಲದೆ ಆಶ್ಲೇಷ ಬಲಿ ಸೇವೆಯು ಬೆಳಗ್ಗೆ 9 ಗಂಟೆಯ ನಂತರ 2 ಪಾಳಿಯಲ್ಲಿ ನಡೆಯಲಿದೆ. ಭಕ್ತಾಧಿಗಳು ಸಹಕರಿಸಬೇಕು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!